ಬಳ್ಳಾರಿ : ಮಧ್ಯಾಹ್ನದ ಬಿಸಿ ಊಟವನ್ನು ಸೇವಿಸಿದ ಬಳಿಕ ವಿದ್ಯಾರ್ಥಿಗಳಿಗೆ ವಾಂತಿಬೇದಿ ಉಂಟಾಗಿದೆ. ಊಟ ಸೇವಿಸಿದ ಬಳಿಕ ವಾಂತಿ ಭೇದಿಯಿಂದ ಸುಮಾರು 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಹೊನ್ನಳ್ಳಿಯಲ್ಲಿ ಈ ಘಟನೆ ನಡೆದಿದೆ.
ಹೌದು ಗ್ರಾಮದ ಸಿದ್ದಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಮಧ್ಯಾಹ್ನದ ಬಿಸಿ ಊಟ ಸೇವಿಸಿದ ಬಳಿಕ ಮಕ್ಕಳಿಗೆ ವಾಂತಿ ಬೇಧಿ ಆಗಿದೆ. ಇದರಿಂದ 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಇಷ್ಟಕ್ಕೆಲ್ಲ ಅಡುಗೆ ಸಿಬ್ಬಂದಿಗಳ ನಿರ್ಲಕ್ಷದಿಂದ ಈ ಒಂದು ಘಟನೆಯಾಗಿದೆ ಎಂದು ಆರೋಪ ಕೇಳಿ ಬಂದಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಕಂಪ್ಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥ ವಿದ್ಯಾರ್ಥಿಗಳ ಆರೋಗ್ಯವನ್ನು ತಹಶೀಲ್ದಾರ ಹಾಗೂ ತಾಲೂಕು ವೈದ್ಯಾಧಿಕಾರಿ ವಿಚಾರಿಸಿದ್ದಾರೆ. ನಿರ್ಲಕ್ಷವಹಿಸಿದ ಅಡುಗೆ ಸಿಬ್ಬಂದಿಗಳ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.