ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಿ.ಈಶ್ವರ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ.
ಈ ಕುರಿತು ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಸಿಇಓ ಎಸ್ ಜೆ ಸೋಮಶೇಖರ್ ಅವರು ಆದೇಶ ಹೊರಡಿಸಿದ್ದು, ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಈಶ್ವರ್ ಬಗ್ಗೆ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ 15 ಹಣಕಾಸಿನ ಖರ್ಚು ವೆಚ್ಚದ ಮಾಹಿತಿಯನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ನೀಡದೆ ಉದ್ಧಟನವನ್ನು ತೋರಿರುವುದಾಗಿ ತಿಳಿಸಿದ್ದಾರೆ.
ಇದಲ್ಲದೇ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಗಳ ನೇತೃತ್ವದಲ್ಲಿ ನೇಮಿಸಲಾದ ತನಿಖಾ ತಂಡ ಆಡಿಟ್ ನಡೆಸಲು ಸೂಕ್ತ ದಾಖಲೆಗಳನ್ನು ನೀಡದೇ ಬೇಜವಬ್ದಾರಿಯನ್ನು ಜವಗೊಂಡನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಿ.ಈಶ್ವರ ಪ್ರದರ್ಶಿಸಿದ್ದಾರೆ. ಹಣಕಾಸಿನ ವ್ಯವಹಾರದ ಲೆಕ್ಕ ಒದಗಿಸದೆ ಕರ್ತವ್ಯ ಲೋಪ ತೋರಿದ್ದಾರೆ ಎಂಬುದಾಗಿ ಹೇಳಿದ್ದಾರೆ.
ಈ ಎಲ್ಲಾ ಕಾರಣದಿಂದಾಗಿ ಸರ್ಕಾರಿ ನೌಕರರಾಗಿ ಕರ್ನಾಟಕ ನಾಗರೀಕ ಸೇವಾ (ನಡವಳಿ) ನಿಯಮಾವಳಿಗಳು-1966 ನಿಯಮ-3(I)(II)&(III) ಉಲ್ಲಂಘಿಸಿದ ಕಾರಣ ಪಿಡಿಓ ಸಿ.ಈಶ್ವರ್ ಅವರನ್ನು ಅಮಾನತುಗೊಳಿಸಿ ಆದೇಶಸಿದ್ದಾರೆ.
ಸಾಗರದ ಪೊಲೀಸ್ ಕಾನ್ಸ್ ಸ್ಟೇಬಲ್ ಲೋಕೇಶ್ ಪುತ್ರಿ ‘ಪ್ರೇಕ್ಷಾ ಎಲ್ ಗೌಡ’ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 1 ತಿಂಗಳಲ್ಲಿ 140 ಕೆಜಿ ಗಾಂಜಾ ಜಪ್ತಿ, 64 ಜನ ಅರೆಸ್ಟ್!