ಬೆಂಗಳೂರು: ಇಂದು ರಾಜ್ಯಾಧ್ಯಂತ 8 ಭ್ರಷ್ಟ ಅಧಿಕಾರಿಗಳ ವಿರುದ್ಧ 37 ಸ್ಥಳಗಲ್ಲಿ ಕರ್ನಾಟಕ ಲೋಕಾಯುಕ್ತದಿಂದ ದಾಳಿಯನ್ನು ನಡೆಸಲಾಯಿತು. ಹಾಗಾದ್ರೇ ಈ ದಾಳಿಯ ವೇಳೆಯಲ್ಲಿ ಪತ್ತೆಯಾದಂತ ಅಸಮತೋನ ಆಸ್ತಿ ಎಷ್ಟು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ.
ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಳಗಾವಿ-2, ಹಾವೇರಿ-1, ದಾವಣಗೆರೆ-1, ಬೀದರ್-1, ಮೈಸೂರು-1, ರಾಮನಗರ-1 ಮತ್ತು ಧಾರವಾಡ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 08 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ ಎಂದಿದೆ.
ಈ ದಿನ ದಿನಾಂಕ: 12.11.2024 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 37 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ.
1) ವಿಠಲ್ ಶಿವಪ್ಪ ಧವಳೇಶ್ವರ್, ಗ್ರಾಮ ಆಡಳಿತಾಧಿಕಾರಿ, ಬೋರೆಗಾವ್ ಗ್ರಾಮ, ನಿಪ್ಪಾಣಿ ತಾಲ್ಲೂಕು, ಬೆಳಗಾವಿ ಜಿಲ್ಲೆ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1 ವಾಸದ ಮನೆ, 4 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,00,50,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,55,195/- ನಗದು, ರೂ. 3,02,049/- ಬೆಲೆ ಬಾಳುವ ಚಿನ್ನಾಭರಣಗಳು, ರೂ 3,45,000/- ಬೆಲೆ ಬಾಳುವ ವಾಹನಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 8,02,244/-
(ಇ) ಒಟು ಮೌಲ್ಯ- ರೂ. 1,08,52,244/-
2) ವೆಂಕಟೇಶ್ ಎಸ್ ಮುಜುಮ್ಹಾರ್, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಕೋರಮಂಗಲ, ಬೆಂಗಳೂರು
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ವಾಸದ ಮನೆಗಳು, 1 ಗ್ಯಾಸ್ ಗೋಡೌನ್, 1 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,63,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ ರೂ. 1,42,000/- ನಗದು, ರೂ. 39,31,900/- ಬೆಲೆ ಬಾಳುವ ಚಿನ್ನಾಭರಣಗಳು, ರೂ 17,70,000/- ಬೆಲೆಬಾಳುವ ವಾಹನಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 58,43,900/-
(a) ಒಟ್ಟು ಮೌಲ್ಯ. 2,21,43,900/-
3) ಕಾಶಿನಾಥ್ ಬುದ್ದಪ್ಪ ಭಜಂತ್ರಿ, ಸಹಾಯಕ ಇಂಜಿನಿಯರ್್ರ, ಗ್ರಾಮೀಣ ಕುಡಿಯುವ ನೀರು ಮತ್ತು ಒಳ ಚರಂಡಿ ಇಲಾಖೆ, ಹಿರೆಕೇರೂರು.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 6 ನಿವೇಶನಗಳು, 2 ವಾಸದ ಮನೆಗಳು, 5 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 2,61,10,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 20,00,000/- ನಗದು, ರೂ. 10,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 11,30,000/- ಬೆಲೆಬಾಳುವ ವಾಹನಗಳು, ರೂ. 18,32,000/- ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ
do. 59,62,000/-
(a) ಒಟ್ಟು ಮೌಲ್ಯ 3,20,72,000/-
4) ಕಮಲ್ ರಾಜ್, ಸಹಾಯಕ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕಾ ಪ್ರದೇಶ, ಕರೂರು, ದಾವಣಗೆರೆ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 6 ನಿವೇಶನಗಳು, 2 ವಾಸದ ಮನೆಗಳು, 1 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,32,11,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,15,000/- 27, 20 15,79,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 32,30,000/- ಬೆಲೆಬಾಳುವ ವಾಹನಗಳು, ರೂ. 18,00,000/- ಬೆಲೆಬಾಳುವ ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 67,24,000/-
(ಇ) ಒಟು ಮೌಲ್ಯ- ರೂ 1,99,35,000/-
5) ರವೀಂದ್ರ ಕುಮಾರ್, ಉಪ-ನಿರ್ದೇಶಕರು, (ಉಪ-ತಹಶೀಲ್ದಾರ್), ತರಬೇತಿ ಸಂಸ್ಥೆ, ಬೀದರ್.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 05 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 07 ನಿವೇಶನಗಳು, 5 ವಾಸದ ಮನೆಗಳು, 10 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 3,50,16,911/- (ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ
ರೂ. 32,000/- ನಗದು, ರೂ. 27,28,732/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 33,10,000/- ಬೆಲೆಬಾಳುವ ವಾಹನಗಳು, ರೂ. 12,04,561/- ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು, ಎಲ್ಲಾ ಸೇರಿ 23 do 72,75,293/-.
(ಇ) ಒಟು ಮೌಲ್ಯ- ರೂ 4,22,92,204/-
6) ನಾಗೇಶ್, ಡಿ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಮೈಸೂರು ಸಿಟಿ ಕಾರ್ಪೋರೇಷನ್, ಮೈಸೂರು
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, 1 ವಾಸದ ಮನೆ. ಎಲ್ಲಾ ಸೇರಿ wwws Lo. 1,95,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 98,000/- ನಗದು, 29,25,360/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 13,61,901/- ಬೆಲೆಬಾಳುವ ವಾಹನಗಳು, ರೂ. 33,89,455/- ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 77,74,716/-.
(a) ಒಟ್ಟು ಮೌಲ್ಯ 2,72,74,716/-
7) ಪ್ರಕಾಶ್, ವಿ, ಡಿ.ಎಂ.ಇ, ಕೆ.ಎಸ್.ಆರ್.ಟಿ.ಸಿ, ರಾಮನಗರ(ನಿವೃತ್ತ)
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 03 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ 8 ನಿವೇಶನಗಳು, 6 ವಾಸದ ಮನೆ, 6 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 3,97,83,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 17,700/- ನಗದು, ರೂ 15,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 13,00,000/- ಬೆಲೆಬಾಳುವ ವಾಹನಗಳು. ಎಲ್ಲಾ ಸೇರಿ www do 28,17,700/-.
(ಇ) ಒಟು ಮೌಲ್ಯ- ರೂ 4,26,00,700/-
8) ಗೋವಿಂದಪ್ಪ ಹನುಮಂತಪ್ಪ ಭಜಂತ್ರಿ, ಸಹಾಯಕ ಕಾರ್ಯದರ್ಶಿ, ಕೆ.ಐ.ಎ.ಡಿ.ಬಿ, ಲಕ್ಕಮನಹಳ್ಳಿ, ಧಾರವಾಡ ಜಿಲ್ಲೆ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 7 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ 3 ನಿವೇಶನಗಳು, 1 ವಾಸದ ಮನೆ, 7 ಎಕರೆ 26 ಗುಂಟೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,85,00,000/- (ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 41,11,000/- ನಗದು, ರೂ 27,11,300/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 20,00,000/- ಬೆಲೆಬಾಳುವ ವಾಹನಗಳು, ರೂ.6,00,000/- , ಬೆಲೆಬಾಳುವ ಇತರೆ ವಸ್ತುಗಳು ರೂ.94,22,300/-
(ಇ) ಎಲ್ಲಾ ಸೇರಿ ಒಟ್ಟು ಮೌಲ್ಯ 2,79,22,300/-
ವರದಿ: ವಸಂತ ಬಿ ಈಶ್ವರಗೆರೆ
ಸಾಗರದ ಪೊಲೀಸ್ ಕಾನ್ಸ್ ಸ್ಟೇಬಲ್ ಲೋಕೇಶ್ ಪುತ್ರಿ ‘ಪ್ರೇಕ್ಷಾ ಎಲ್ ಗೌಡ’ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ