ಬೆಂಗಳೂರು: ತಂದೆಯ ಹೆಸರಿಲ್ಲದೆ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರನ್ನು ಮಾತ್ರ ತಾಯಿ ಎಂದು ಪಾಸ್‌ಪೋರ್ಟ್‌ನಲ್ಲಿ ನಮೂದಿಸಿರುವುದು ಭಾರತದಲ್ಲಿ ಇದೇ ಮೊದಲು ಆಗಿದೆ.
ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅವರ ಮಗ ಅವಿನ್ ಅಕ್ಕೈ ಪದ್ಮಶಾಲಿ ಅವರಿಗೆ ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯು ತಂದೆಯ ಹೆಸರನ್ನು ಉಲ್ಲೇಖಿಸದೆ ಪಾಸ್‌ಪೋರ್ಟ್ ನೀಡಿದೆ. ತಂದೆಯ ಹೆಸರಿಲ್ಲದೆ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರನ್ನು ಮಾತ್ರ ತಾಯಿ ಎಂದು ಪಾಸ್‌ಪೋರ್ಟ್‌ನಲ್ಲಿ ನಮೂದಿಸಿರುವುದು ಭಾರತದಲ್ಲಿ ಇದೇ ಮೊದಲು ಎಂದಿದೆ.
ತಂದೆಯ ಹೆಸರಿಲ್ಲದೆ ನೀಡಲಾದ ಪಾಸ್‌ಪೋರ್ಟ್ ದೇಶದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಪೋಷಕರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪಾಸ್‌ಪೋರ್ಟ್ ಪಡೆಯಲು ಸಹಕಾರವಿತ್ತ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳಿಗೆ ಅಕ್ಕೈ ಪದ್ಮಶಾಲಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ‘ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ ಎಂದು ತಿಳಿಸಿದೆ.
ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅವರ ಮಗ ಅವಿನ್ ಅಕ್ಕೈ ಪದ್ಮಶಾಲಿ ಅವರಿಗೆ ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯು ತಂದೆಯ ಹೆಸರನ್ನು ಉಲ್ಲೇಖಿಸದೆ ಪಾಸ್‌ಪೋರ್ಟ್ ನೀಡಿದೆ. ತಂದೆಯ ಹೆಸರಿಲ್ಲದೆ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರನ್ನು ಮಾತ್ರ… pic.twitter.com/IkQRTrtwR3
— DIPR Karnataka (@KarnatakaVarthe) November 12, 2024
ಅತಿಯಾದರೆ ಅಮೃತ ಕೂಡ ವಿಷವಾಗುತ್ತದೆ ಜೋಕೆ: ರಾಜ್ಯ ಸರ್ಕಾರಕ್ಕೆ ‘ಎಂ.ಪಿ ರೇಣುಕಾಚಾರ್ಯ’ ಎಚ್ಚರಿಕೆ
‘ಶಾಲಾ ಬಾಲಕಿಯರ ಋತುಚಕ್ರ ನೀತಿ’ಗೆ ಅನುಮೋದನೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರದ ಸ್ಪಷ್ಟನೆ