ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆಗೆ ಮತದಾನ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ, ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೂರು ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಜರುಗಲಿದ್ದು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.
ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್ ಗಾಗಿ ನಿಯೋಜಿತಗೊಂಡಿರುವ ಪೋಲಿಸರು, ಗೃಹರಕ್ಷಕ ದಳದವರು ಆಗಮಿಸಿದ್ದರು. ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ಆಯಾ ಗ್ರಾಮಗಳಲ್ಲಿನ ಮತಗಟ್ಟೆಗಳತ್ತ ತೆರಳುವಂತಹ ಮಾರ್ಗಗಳನ್ನು ಗುರುತಿಸಿ ಕರೆದುಕೊಂಡು ಹೋಗಲು ಬಸ್, ಕ್ರೂಸರ್ ಹಾಗೂ ಜೀಪ್‌ಗಳು ಕಾಲೇಜು ಮುಂಭಾಗದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು.
ಮಸ್ಟರಿಂಗ್ ಕಾರ್ಯಕ್ಕೆ ಆಗಮಿಸಿದ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದಲ್ಲಿ ವ್ಯತ್ಯಯ ಉಂಟಾದಲ್ಲಿ, ತ್ವರಿತ ಸ್ಪಂದನೆಗಾಗಿ, ವೈದ್ಯರಿಂದ ಆರೋಗ್ಯ ತಪಾಸಣೆ, ಅಗತ್ಯ ಔಷÀಧಿಗಳು, ಓಆರ್‌ಎಸ್, ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು.
ಚುನಾವಣಾ ಸಾಮಗ್ರಿ ವಿತರಣೆ, ಮತಯಂತ್ರಗಳ ವಿತರಣೆ, ಚುನಾವಣೆಗೆ ಮತಗಟ್ಟೆಗಳಿಗೆ ನಿಯೋಜನೆ, ಚುನಾವಣಾ ಕರ್ತವ್ಯಕ್ಕೆ ತೆರಳಲು ಆಗಮಿಸಿದ್ದ ಅಧಿಕಾರಿ, ಸಿಬ್ಬಂದಿಗಳಿಗೆ ಕಾಲೇಜು ಆವರಣದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಮತಗಟ್ಟೆಗಳತ್ತ ತೆರಳುವ ಮುನ್ನ ಮಧ್ಯಾಹ್ನದ ಊಟ ಪೂರೈಸಿಕೊಂಡು ಹೋಗುವ ರೀತಿ ವ್ಯವಸ್ಥೆ ಮಾಡಲಾಗಿತ್ತು.
ಮೂರು ಕ್ಷೇತ್ರಗಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನವೆಂಬರ್ 13 ರ ಬುಧವಾರದಂದು ನಡೆಯಲಿದ್ದು, ಚುನಾವಣಾ ಆಯೋಗದಂತೆ ವೇತನ ಸಹಿತ ರಜೆ ನೀಡಲು ನಿರ್ದೇಶನವಿದ್ದು, ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ, ಕಾರ್ಖಾನೆ, ವಾಣಿಜ್ಯ ಸಂಸ್ಥೆ, ಅಂಗಡಿ ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮತದಾನ ಮಾಡಲು ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ) ರನ್ವಯ ಕಾರ್ಮಿಕರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ ಸಂವಿಧಾನಾತ್ಮಕ ಹಕ್ಕಾದ ಕಡ್ಡಾಯವಾಗಿ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಲಾಗಿದೆ.