ಬೀದರ್ : ಒಗ್ಗರಣೆ ಅನ್ನ ತಿಂದು 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ನಡೆದಿದೆ.
ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿರುವ ಬಸವತೀರ್ಥ ವಿದ್ಯಾಪೀಠದ ಶಾಲೆಯಲ್ಲಿ ಬೆಳಗ್ಗೆ ಒಗ್ಗರಣೆ ಅನ್ನ ತಿಂದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಬೇಧಿಯಿಂದ ಬಳಲುತ್ತಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಎಂಎಲ್ ಸಿ ಭೀಮರಾವ್ ಪಾಟೀಲ್ ಭೇಟಿ ನೀಡಿದ್ದು, ಮಕ್ಕಳ ಅರೋಗ್ಯ ವಿಚಾರಿಸಿದ್ದಾರೆ.