ಬೆಂಗಳೂರು: ಬಸ್, ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಲಗೇಜ್ ರೂಂಗಳ ವ್ಯವಸ್ಥೆ ಇದೆ. ಆದರೇ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇರಲಿಲ್ಲ. ಈಗ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲೂ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯವನ್ನು ಆರಂಭಿಸಲಾಗುತ್ತಿದೆ.
ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! SafeCloak ನ ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯವು ಈಗ ಮೆಜೆಸ್ಟಿಕ್ ಮತ್ತು ಇತರ ಆಯ್ದ ನಿಲ್ದಾಣಗಳಲ್ಲಿ ಲಭ್ಯ. ನಿಮ್ಮ ಬ್ಯಾಗ್‌ಗಳನ್ನು 6 ಗಂಟೆಗಳಿಗೆ (ಮಧ್ಯಮ ಗಾತ್ರ) ಕೇವಲ ₹70 ಮತ್ತು ದೊಡ್ಡ ಗಾತ್ರದ ಲಗೇಜ್ ಗೆ ₹100 ನಿಗದಪಡಿಸಲಾಗಿದೆ ಎಂದಿದೆ.
ಸೋ ಇನ್ಮುಂದೆ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಂತ ಪ್ರಯಾಣಿಕರು ತಮ್ಮ ಲಗೇಜ್ ಗಳನ್ನು ಸೇಫ್ ಕ್ಲಾಕ್ ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್ ನಲ್ಲಿ ಇರಿಸಿ ತೆರಳಬಹುದು. ಆದರೇ ಇದಕ್ಕೆ ಹಣವನ್ನು ಪಾವತಿಸಬೇಕಾಗುತ್ತದೆ.
BREAKING : ಮರಕುಂಬಿ ದಲಿತ ದೌರ್ಜನ್ಯ ಕೇಸ್: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು!
BREAKING : ರಾಜ್ಯದಲ್ಲಿ ಇ – ಖಾತೆ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಮಹತ್ವದ ಕ್ರಮ