ಮೈಸೂರು: ಮುಡಾ ಕೇಸ್ ದೂರುದಾರರಾದಂತ ಸ್ನೇಹಮಯಿ ಕೃಷ್ಣ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೈಸೂರಿನ ದೇವರಾಜ ಪೊಲೀಸ್ ಠಾಣೆಗೆ ತೆರಳಿದ್ದಂತ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರತಿ ದಿನ ಒಂದಲ್ಲ ಒಂದು ಆರೋಪ ಮಾಡುತ್ತಿದ್ದಾರೆ. ಈ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬುದಾಗಿ ದೂರು ನೀಡಿದ್ದರು.
ಲಕ್ಷ್ಮಣ್ ನೀಡಿದಂತ ದೂರು ಆಧರಿಸಿ ಸ್ನೇಹಮಯಿ ಕೃಷ್ಣ ವಿರುದ್ಧ ಬ್ಲಾಕ್ ಮೇಲ್ ಆರೋಪದಲ್ಲಿ ದೇವರಾಜ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಈ ಮೂಲಕ ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣಗೆ ಬಿಗ್ ಶಾಕ್ ನೀಡಿದ್ದಾರೆ.
‘ಬಂಡೀಪುರ ಅರಣ್ಯ ಪ್ರದೇಶ’ದಲ್ಲಿ ‘ರಾತ್ರಿ ವೇಳೆ ವಾಹನಗಳ ನಿಷೇಧ’ ತೆಗೆಯಬಾರದು: ವಾಟಾಳ್ ನಾಗರಾಜ್ ಆಗ್ರಹ
BREAKING : ಮರಕುಂಬಿ ದಲಿತ ದೌರ್ಜನ್ಯ ಕೇಸ್: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು!