ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನವೆಂಬರ್ 24, 2024ರಂದು ನಡೆಸಲು ಉದ್ದೇಶಿಸಿರುವ ಕೆಸೆಟ್ ಪ್ರಾಧ್ಯಾಪಕರುಗಳ ಅರ್ಹತಾ ಪರೀಕ್ಷೆಯ ಮನೋವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಕೇವಲ ಆಂಗ್ಲ ಭಾಷೆಯಲ್ಲಿ ನೀಡುತ್ತಿರುವ ನಿರ್ಧಾರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತಂತೆ ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದಿರುವ ಡಾ.ಬಿಳಿಮಲೆ, ಪರೀಕ್ಷಾ ಪ್ರಾಧಿಕಾರದ ನಿರ್ಣಯ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಷ್ಟೇ ಅಲ್ಲ, ಈ ನೆಲದ ಕಾನೂನನ್ನು ಉಲ್ಲಂಘಿಸುವ ವಿಷಯವಾಗಿರುತ್ತದೆ. ಈ ಕುರಿತಂತೆ ಅದು ಕೂಡಲೇ ಕ್ರಮವಹಿಸಿ ಕನ್ನಡ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಒದಗಿಸುವುದು ಮತ್ತು ಈ ಅಚಾತುರ್ಯಕ್ಕೆ ಕಾರಣವೇನು ಎಂಬ ಕುರಿತು ವರದಿ ಸಲ್ಲಿಸುವುದು ಎಂದು ಸೂಚಿಸಿದ್ದಾರೆ.
ಒಂದು ವೇಳೆ ಆಂಗ್ಲಭಾಷೆಯಲ್ಲಿ ಮಾತ್ರ ಪರೀಕ್ಷೆಯನ್ನು ನಿರ್ವಹಿಸಿ ಕನ್ನಡ ಭಾಷಾ ವಿದ್ಯಾರ್ಥಿಗಳಿಗೆ ಅನ್ಯಾಯವಾದಲ್ಲಿ ಮುಂದಿನ ಆಗುಹೋಗುಗಳಿಗೆ ತಾವೇ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಎಂದು ಡಾ.ಬಿಳಿಮಲೆ ಪರೀಕ್ಷಾ ಪ್ರಾಧಿಕಾರದ ಮುಖ್ಯಸ್ಥರಿಗೆ ಎಚ್ಚರಿಸಿದ್ದಾರೆ.
BREAKING : ಮರಕುಂಬಿ ದಲಿತ ದೌರ್ಜನ್ಯ ಕೇಸ್: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು!
ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ಈ ಹಂತ ಅನುಸರಿಸಿ, ‘ಇ-ಖಾತಾ’ ಪಡೆಯಲು ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಿ | E-Khata
ಬೆಂಗಳೂರು ಜನತೆ ಗಮನಕ್ಕೆ: ನ.15ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut