ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮೊದಲ ಹಂತದಲ್ಲಿ ರಾಜ್ಯದ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆಯನ್ನು ಮಾಡಲಾಗುತ್ತಿದೆ.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆ ಹೆಚ್ಚಿಸಲು ರಾಜ್ಯ ಸರ್ಕಾರ ಅದ್ಯತೆ ನೀಡುತ್ತಿದೆ. ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ನೀಡಲಾಗುತ್ತಿದೆ. ಮಕ್ಕಳು ಬಾಹ್ಯಾಕಾಶ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು ಮತ್ತು ಆ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದ್ದೇವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟೆಲಿಸ್ಕೊಪ್ ಒದಗಿಸುವ ಯೋಜನೆ ಬಹಳ ವಿಶೇಷವಾಗಿದ್ದು, ಭವಿಷ್ಯದ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಇಸ್ರೋ ಚೇರ್ಮನ್ ಸೋಮನಾಥ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆ ಹೆಚ್ಚಿಸಲು ರಾಜ್ಯ ಸರ್ಕಾರ ಅದ್ಯತೆ ನೀಡುತ್ತಿದೆ. ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ನೀಡಲಾಗುತ್ತಿದೆ. ಮಕ್ಕಳು ಬಾಹ್ಯಾಕಾಶ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು ಮತ್ತು ಆ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದ್ದೇವೆ ಎಂದು ವಿಜ್ಞಾನ… pic.twitter.com/wTAR2BuVg6
— DIPR Karnataka (@KarnatakaVarthe) November 13, 2024
ರಸ್ತೆ ಮೇಲೆ ವ್ಯಾಪಾರ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ: ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್
‘KSET ಅರ್ಹತಾ ಪರೀಕ್ಷೆ’ಗೆ ಪ್ರಶ್ನೆ ಪತ್ರಿಕೆಯನ್ನು ಕನ್ನಡದಲ್ಲೇ ನೀಡಿ: KEAಗೆ ಡಾ.ಪುರುಷೋತ್ತಮ ಬಿಳಿಮಲೆ ಸೂಚನೆ