ಬೆಂಗಳೂರು: ರಾಜ್ಯದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಇಂದು ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ಎನ್ನುವ ಮಾಹಿತಿ ಮುಂದಿದೆ ಓದಿ.
ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಕರ್ನಾಟಕ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮತದಾನದ ಶೇಕಡವಾರು ವಿವರ ಈ ಕೆಳಗಿಂತಿದೆ ಎಂದಿದೆ.
ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ 5 ಗಂಟೆಯವರೆಗೆ 84.26ರಷ್ಚು ಮತದಾನವಾಗಿದೆ. ಶಿಗ್ಗಾಂವಿಯಲ್ಲಿ ಶೇ.75.07ರಷ್ಟು ಹಾಗೂ ಸಂಡೂರು ಕ್ಷೇತ್ರದಲ್ಲಿ ಶೇ.71.47ರಷ್ಟು ಮತದಾನವಾಗಿದೆ.
ಒಟ್ಟಾರೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇ.76.9ರಷ್ಟು ಮತದಾನವಾಗಿದೆ ಅಂತ ರಾಜ್ಯ ಚುನಾವಣಾ ಆಯೋಗವು ಮಾಹಿತಿ ನೀಡಿದೆ.
ಕರ್ನಾಟಕ ವಿಧಾನಸಭೆಯ 3 ಕ್ಷೇತ್ರಗಳ ಉಪಚುನಾವಣೆಯ ಮತದಾನದ ಶೇಕಡವಾರು ವಿವರ (7.00 AM – 5.00 PM) pic.twitter.com/VSPgwzyvvG
— Chief Electoral Officer, Karnataka (@ceo_karnataka) November 13, 2024
ರಸ್ತೆ ಮೇಲೆ ವ್ಯಾಪಾರ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ: ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್
ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus