ಬೆಂಗಳೂರು: ಮಾರ್ಚ್ 2025ರಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ರಾಜ್ಯದ ಶಾಲಾ, ಕಾಲೇಜುಗಳಿಂದ ಹಾಜರಾಗುವಂತ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳಉ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ ಲೈನ್ ಮುಖಾಂತರ ನೋಂದಾಯಿಸಿಸಲು ಅವದಿಯನ್ನು ದಿನಾಂಕ 11-11-2024ರವರೆಗೆ ನಿಗದಿ ಪಡಿಸಿ ಮಾರ್ಗಸೂಚಿಯನ್ನು ಹೊರಡಿಸಲಾಗಿತ್ತು ಎಂದಿದ್ದಾರೆ.
ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳು ನೋಂದಣಿ ಮಾಡಲು ದಿನಾಂಕಗಳನ್ನು ಪುನಃ ವಿಸ್ತರಿಸಲು ಕೋರಿಕೆಗಳ್ನು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ನೋಂದಣಿಗೆ ದಿನಾಂಕವನ್ನು 20-11-2024ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ಪೂರೈಕೆ