ಹುಬ್ಬಳ್ಳಿ : ಡಾ. ಬಿ ಆರ್ ಅಂಬೇಡ್ಕರ್ ಅವರು ಇಸ್ಲಾಂ ಧರ್ಮವನ್ನು ಸ್ವೀಕರಿಸಲು ಸಿದ್ಧತೆ ಮಾಡಿಕೊಂಡಿದ್ದರು ಎಂದು ಕಾಂಗ್ರೆಸ್ಸಿನ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಹೇಳಿಕೆಗೆ ಇದೀಗ ವಿರೋಧ ವ್ಯಕ್ತವಾಗಿದ್ದು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಅಜ್ಜಂಪಿರ್ ಖಾದ್ರಿ ವಿರುದ್ಧ ಇದೀಗ ದೂರು ದಾಖಲಾಗಿದೆ.
ಹೌದು ಮಾಜಿ ಶಾಸಕ ಜಂಪರ್ ಖಾದ್ರಿ ಹೇಳಿಕೆ ಖಂಡಿಸಿ ಇದೀಗ ಪೊಲೀಸರಿಗೆ ದೂರು ಸಲ್ಲಿಕೆಯಾಗಿದೆ. ಮಂಜುನಾಥ್ ತೇರದಾಳ್ ಎನ್ನುವವರಿಂದ ದೂರು ನೀಡಿದ್ದಾರೆ. ಅಜ್ಜಂಪೀರ್ ಖಾದ್ರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಂಜುನಾಥ್ ದೂರು ನೀಡಿದ್ದಾರೆ.
ಅಜ್ಜಂಪೀರ್ ಖಾದ್ರಿ ಡಾ. ಅಂಬೇಡ್ಕರ್ ಅವರ ಚಾರಿತ್ರ ಹರಣ ಮಾಡಿದ್ದಾರೆ.ಖಾದ್ರಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಸೇರುತ್ತೇನೆ ಎಂದು ಹೇಳಿರಲಿಲ್ಲ. ಯಾವುದೇ ಆಧಾರವಿಲ್ಲದೆ ಹೇಳಿಕೆ ನೀಡಿದ ಅಜ್ಜಂಪೀರ್ ಖಾದ್ರಿ ವಿರುದ್ಧ ಕ್ರಮ ಕೈಗೊಳ್ಳಿ. ಎಂದು ಹಳೆ ಹುಬ್ಬಳ್ಳಿ ಠಾಣೆಗೆ ಮಂಜುನಾಥ ತೇರದಾಳ ದೂರು ನೀಡಿದ್ದಾರೆ.