ಮೈಸೂರು : ನೇಣು ಬಿಗಿದಿರುವ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿದೆ. ಮೈಸೂರು ಜಿಲ್ಲೆಯ ಪ್ರಿಯಾಪಟ್ಟಣ ತಾಲೂಕಿನ ಡ್ಡಹೊನ್ನೂರಿನ ಖಾಲಿ ಮನೆಯೊಂದರಲ್ಲಿ ಈ ಒಂದು ಘಟನೆ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಸುರೇಶ್ ಹಾಗೂ ಪಲ್ಲವಿ ಎನ್ನುವ ದಂಪತಿಗಳ ಶವ ಪತ್ತೆಯಾಗಿದೆ.
ಮೃತರನ್ನು ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತ ಸುರೇಶ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎನ್ನಲಾಗಿದೆ. ಮೃತ ದಂಪತಿಗಳು ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.ಘಟನೆ ಕುರಿತಂತೆ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.