ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್j ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ ವಕೀಲ ಅಭಿಷೇಕ್ ಸಿಂಘ್ವಿ ಮನವಿ ಮಾಡಿದ್ದಾರೆ. ಮನವಿ ಆಲಿಸಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್ ವಿಭಾಗೀಯಪೀಠ ನಿಗದಿಪಡಿಸಿದೆ.
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ತಡೆ ಕಾಯ್ದೆ 17A ಅಡಿಯಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದರು. ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾ ಗೊಳಿಸಿತ್ತು.
ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಏಕ ಸದಸ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ವೇಳೆ ತುರ್ತು ವಿಚಾರಣೆ ಅಗತ್ಯವಿದೆ ಎಂದು ಸಿಜೆ ಪ್ರಶ್ನಿಸಿದ್ದಾರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೌದು ತುರ್ತು ವಿಚಾರಣೆ ಅಗತ್ಯವಿದೆ ಎಂದಾಗ ಇದೇ ನವೆಂಬರ್ 23ಕ್ಕೆ ಮೇಲ್ಮನವಿ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿಪಡಿಸಲಾಗಿದೆ.