ಶಿವಮೊಗ್ಗ : 2024-25 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಡಿಯಲ್ಲಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರ 2.24 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿದಲು ಆದೇಶಿಸಿದ್ದು, ಸಾಮಾನ್ಯ ಭತ್ತ ರೂ.2300/- ಎ ಗ್ರೇಡ್ ಭತ್ತ ರೂ.2320/- ದರವನ್ನು ನಿಗಧಿ ಮಾಡಿದೆ.
ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನ.15 ರಿಂದ ಭತ್ತ ಮಾರಾಟ ಮಾಡಲು ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಶಿವಮೊಗ್ಗ ಜಿಲ್ಲಾ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರಾಜ್ಯ ಸಹಕಾರ ಮಾರಾಟ ಮಹಾಮಂಡಳ(ನಿ) ವನ್ನು ಸಂಗ್ರಹಣಾ ಏಜೆಸ್ಸಿಗಳಾಗಿ ನೇಮಿಸಲಾಗಿದೆ.ಪ್ರತಿ ಎಕರೆಗೆ 25 ಕ್ವಿಂಟಾಲ್‌ನAತೆ ಗರಿಷ್ಠ 40 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು.
ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಎ.ಪಿ.ಎಂ.ಸಿ ಆವರಣದಲ್ಲಿರುವ ಖರೀದಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿಸಲಾಗುತ್ತಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡ ಸಂದರ್ಭದಲ್ಲಿ ಅಗತ್ಯವಿದ್ದ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು. ಭತ್ತವನ್ನು ದಿ: 01-01-2025 ರಿಂದ ದಿ:31-03-2025ರ ಅವಧಿಯಲ್ಲಿ ಖರೀದಿಸಲಾಗುತ್ತದೆ. ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.