ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ನೀಡಿದೆ.
ಹೌದು, ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ನಗರದಲ್ಲಿರುವ ತಮ್ಮ ಮನೆಗೆ ಬಂದು ಲೋಕಾಯುಕ್ತ ಇನ್ಪೆಕ್ಟರ್ ನೀಡಿದ್ದ ನೋಟಿಸ್ ಅನ್ನು ಸಚಿವ ಜಮೀರ್ ಸ್ವೀಕರಿಸಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸಚಿವರಿಗೆ ಪೊಲೀಸರು ಸೂಚಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಇಡಿ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್ಪಿ ನೋಟಿಸ್ ನೀಡಿದ್ದಾರೆ. ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ.