ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಬೆಳಕಿಗೆ ಬಂದಿದ್ದು, ಬೆಳಗಾವಿಯಲ್ಲಿ ಸಾರ್ವಜನಿಕವಾಗಿ ಮಹಿಳೆಯ ಬಟ್ಟೆಯನ್ನು ಹರಿದು ಹಾಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬೆಳಗಾವಿಯ ವಡ್ಡರವಾಡಿಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಮಗಳು ವೇಶ್ಯಾವಾಟಿಕೆ ಮಾಡುತ್ತಿದ್ದಾಳೆ ಎಂದು ಆರೋಪಿಸಿ ತಾಯಿ, ಮಗಳ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.ಸದ್ಯ ಹಲ್ಲೆಯ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಪಕ್ಕದ ಮನೆಯ ಅಷ್ಟೇಕರ್ ಕುಟುಂಬದಿಂದ ಹಲ್ಲೆ ಮಾಡಲಾಗಿದೆ. ಸಂಬಂಧ ಇಲ್ಲದವರೆಲ್ಲ ಮನೆಗೆ ಬಂದು ಹೋಗುತ್ತಾರೆ. ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಿ ಎಂದು ಹಲ್ಲೆ ನಡೆಸಲಾಗಿದೆ. ತಾಯಿ, ಮಗಳನ್ನು ಮನೆ ಬಿಡಿಸಲು ಜಗಳ ತೆಗೆದು ಹಲ್ಲೆ ಮಾಡಲಾಗಿದೆ ಎನ್ನಲಾಗಿದ್ದು, ತಮಗೆ ಜೀವ ಭಯ ಇದೆ ರಕ್ಷಣೆ ಕೊಡಿ ಎಂದು ಸಂತ್ರಸ್ತರು ಮನವಿ ಮಾಡಿದ್ದಾರೆ. ಬೆಳಗಾವಿ ಕಮಿಷನರ್ ಗೆ ದೂರು ನೀಡಿದ ಬಳಿಕ ನಿನ್ನೆ ರಾತ್ರಿ ಮೂವರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.