ಬೆಂಗಳೂರು: ರಾಜ್ಯ ಸರ್ಕಾರವು ಎಪಿಎಲ್ ಕಾರ್ಡ್ ಗಳ ರದ್ದತಿಗೆ ಆಹಾರ ಇಲಾಖೆಗೆ ನಿರ್ದೇಶ ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಮೂಲಕ ಎಪಿಎಲ್ ಕಾರ್ಡ್ ರದ್ದಾಗುವ ಆಂತಕದಲ್ಲಿ ಇದ್ದವರಿಗೆ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಈ ಮಾಹಿತಿಯನ್ನು ವಾರ್ತಾ ಇಲಾಖೆ ಹಂಚಿಕೊಂಡಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂಬುದಾಗಿ ತಿಳಿಸಿದೆ.
ಕೆಲವು ದಿನಪತ್ರಿಕೆಗಳಲ್ಲಿ ಇ – ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ ಎಂದಿದೆ.
ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16 ರಂದು 25,62,566 ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ ಎಂದು ಹೇಳಿದೆ.
ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಕ್ರಮವನ್ನು ಈವರೆಗೆ ಕೈಗೊಂಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸಿದೆ.
ಸ್ಪಷ್ಟೀಕರಣ
ಎಪಿಎಲ್ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ.
ಕೆಲವು ದಿನಪತ್ರಿಕೆಗಳಲ್ಲಿ ಇ – ಕೆವೈಸಿ ನೋಂದಣಿ ಮಾಡಿಕೊಳ್ಳದ… pic.twitter.com/TXcZSyBMc8
— DIPR Karnataka (@KarnatakaVarthe) November 16, 2024
BIG NEWS: ‘ಅಂಗಾಂಗ ದಾನ’ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಬಳ್ಳಾರಿ ಜಿಲ್ಲೆ ದೇಶಕ್ಕೆ ಪ್ರಥಮ
BREAKING: ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ