ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, 3 ವರ್ಷದ ಮಗಳ ಎದುರೇ ತಂದೆ-ತಾಯಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಹಾವೇರಿ ತಾಲೂಕಿನ ಬೆಳವಗಿ ಗ್ರಾಮದಲ್ಲಿ ಮಗಳ ಎದುರೇ ತಂದೆ, ತಾಯಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹನುಮಂತ ಹೊನ್ನಪ್ಪ (32) ಪತ್ನಿ ಸವಿತಾ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ದಂಪತಿಯ 3 ವರ್ಷದ ಮಗಳು ಚೇತನಾ ತಡರಾತ್ರಿ ಜೋರಾಗಿ ಅಳುತ್ತಿದ್ದಾಗ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.