ಮುಂಬೈ : ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡ ವ್ಯಕ್ತಿಯಿಂದ ಮುಂಬೈನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಗ್ರಾಹಕ ಸೇವಾ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಈ ಬಗ್ಗೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದು, ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಹಾಯವಾಣಿ ಸಂಖ್ಯೆಗೆ ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನಿಂದ ಕರೆ ಬಂದಿದ್ದು, ಕೇಂದ್ರ ಬ್ಯಾಂಕ್ ಅನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ.ಬೆದರಿಕೆ ಹಾಕುವ ಮೊದಲು ಫೋನ್ನಲ್ಲಿ ಹಾಡನ್ನು ಹಾಡಿದ್ದಾನೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ಅಧಿಕಾರಿಗಳು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಶೋಧ ನಡೆಸಿದರು. ಆದರೆ, ಅನುಮಾನಾಸ್ಪದವಾಗಿ ಯಾವ ವಸ್ತುವೂ ಕಂಡುಬಂದಿಲ್ಲ. ಕರೆ ಮಾಡಿದವರನ್ನು ಪತ್ತೆಹಚ್ಚಲು ಅವರು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.