ಮೈಸೂರು : ಬಿಪಿಎಲ್ ಕಾರ್ಡ್ ಪರಿಷ್ಕರಣೆಗೂ ಗ್ಯಾರಂಟಿಗಳಿಗೂ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಹಾಗೂ ಗ್ಯಾರಂಟಿಗಳಿಗೂ ಸಂಬಂಧವಿಲ್ಲ. ಈಗಾಗಲೇ ಸರ್ಕಾರಿ ನೌಕರರು, ಎರಡು ಕಾರು ಹೊಂದಿರುವವರು, ತೆರಿಗೆ ಕಟ್ಟುತ್ತಿದ್ದವರು, 3 ಹೆಕ್ಟೇರ್ ಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಗಳನ್ನು ಬಳಸುತ್ತಿದ್ದಾರೆ. ಇಂಥವರು ತಾವೇ ಸ್ವತಃ ಕಾರ್ಡ್ ಗಳನ್ನು ವಾಪಸ್ ನೀಡಬೇಕಿತ್ತು ಎಂದು ತಿಳಿಸಿದ್ದಾರೆ.
ಈಗಾ ನಾವು ಕಾರ್ಡ್ ಗಳನ್ನು ಪರಿಷ್ಕರಣೆ ಮಾಡುವ ಪರಿಸ್ತಿತಿ ಬಂದಿದೆ. ಈ ಕೆಲಸ ಮುಂಚೆನೇ ಮಾಡಬೇಕಾಗಿತ್ತು. ತಡವಾದರೂ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.