Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ `ಬೆಂಗಳೂರು ಟೆಕ್ ಸಮ್ಮಿಟ್’ ಆಯೋಜನೆ : ಒಂದೇ ವೇದಿಕೆಯಲ್ಲಿ ಜಾಗತಿಕ ಮಟ್ಟದ ಹೂಡಿಕೆದಾರರು!
KARNATAKA

ನಾಳೆಯಿಂದ `ಬೆಂಗಳೂರು ಟೆಕ್ ಸಮ್ಮಿಟ್’ ಆಯೋಜನೆ : ಒಂದೇ ವೇದಿಕೆಯಲ್ಲಿ ಜಾಗತಿಕ ಮಟ್ಟದ ಹೂಡಿಕೆದಾರರು!

By kannadanewsnow5718/11/2024 1:02 PM

ಬೆಂಗಳೂರು : ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಇಲಾಖೆಯು ಸ್ಟಾರ್ಟಪ್ ಗಳು ಹಾಗೂ ಜಾಗತಿಕ ಬಂಡವಾಳದಾರರನ್ನು ಒಂದೇ ವೇದಿಕೆಯಡಿ ತರುವ ಸದುದ್ದೇಶದಿಂದ ನವೆಂಬರ್ 19 ರಿಂದ 21 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ “ಬೆಂಗಳೂರು ಟೆಕ್ ಸಮ್ಮಿಟ್” (ಬಿಟಿಎಸ್ – 2024) ಅನ್ನು ಆಯೋಜಿಸಲಾಗಿದೆ.

ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್‌ 19 ರಿಂದ 21ರ ವರೆಗೆ ನಡೆಯಲಿದೆ.

ಆಸ್ಟ್ರೇಲಿಯಾ, ಬ್ರಿಟನ್‌, ಫ್ರಾನ್ಸ್‌, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್‌, ಇಸ್ರೇಲ್‌, ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಉದ್ಘಾಟನೆ ಸಮಾರಂಭದಲ್ಲಿ ಜರ್ಮನಿಯ ಆರ್ಥಿಕ ಇಲಾಖೆಯ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ ನವೋದ್ಯಮಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗೋಷ್ಠಿಗಳು ನಡೆಯಲಿವೆ.

ಜಗತ್ತಿನಾದ್ಯಂತ ಪ್ರತಿಷ್ಠಿತ ಕಂಪನಿಗಳು, ಬಂಡವಾಳ ಸಂಸ್ಥೆಗಳು ಸೇರಿ 50 ಕ್ಕೂ ಹೆಚ್ಚು ಜಾಗತಿಕ ಹೂಡಿಕೆದಾರರು, ಜಾಗತಿಕ ನಿಯೋಗದ ಸದಸ್ಯರು ಈ ಸಮ್ಮಿಟ್’ನಲ್ಲಿ ಭಾಗವಹಿಸಲಿದ್ದಾರೆ. ಆಸ್ಟ್ರೇಲಿಯಾ, ಯುನೈಟೆಡ್ ಕಿಂಗ್ ಡಮ್, ಫ್ರಾನ್ಸ್, ಆಸ್ಟ್ರಿಯಾ, ಐರೋಪ್ಯ ಒಕ್ಕೂಟ, ಡೆನ್ಮಾರ್ಕ್, ಫಿನ್ಲ್ಯಾಂಡ್, ಪೋಲೆಂಡ್, ಜಪಾನ್, ಜರ್ಮನಿ, ಸ್ವಿಟ್ಜರ್ಲೆಂಡ್, ಇಸ್ರೇಲ್ ಮತ್ತು ಅಮೆರಿಕ ಸೇರಿದಂತೆ 15 ಕ್ಕೂ ಹೆಚ್ಚು ದೇಶಗಳ ನಿಯೋಗಗಳು ಬಿಟಿಎಸ್ 2024 ನಲ್ಲಿ ಪಾಲ್ಗೊಳ್ಳುತ್ತಿವೆ.

ಸ್ಟಾರ್ಟಪ್‌ಗಳ ಅಭಿವೃದ್ಧಿಗಾಗಿ ‘ ಬೆಂಗಳೂರು ಟೆಕ್ ಸಮ್ಮಿಟ್ – 2024

➧ ನವೆಂಬರ್ 19 ರಿಂದ 21 ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜನೆ
➧ 118 ಸ್ಟಾರ್ಟಪ್’ಗಳು ಹಾಗೂ 50 ಜಾಗತಿಕ ಹೂಡಿಕೆದಾರರನ್ನು ಒಂದೇ ವೇದಿಕೆಯಡಿ ತರುವ ಪ್ರಯತ್ನ
➧ ಬಿಟಿಎಸ್ – 2024 ರಲ್ಲಿ ಆಸ್ಟ್ರೇಲಿಯಾ, ಯುಕೆ, ಫ್ರಾನ್ಸ್, ಆಸ್ಟ್ರಿಯಾ, ಇಯು, ಡೆನ್ಮಾರ್ಕ್ ಸೇರಿ 50ಕ್ಕೂ ಹೆಚ್ಚು ಜಾಗತಿಕ ನಿಯೋಗ ಭಾಗಿ

ನಾವಿನ್ಯತೆ, ಆವಿಷ್ಕಾರ ಕ್ಷೇತ್ರದಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಈ ಶೃಂಗಸಭೆ ಮೂಲಕ ನಮ್ಮ ರಾಜ್ಯದ ಸ್ಟಾರ್ಟಪ್ ಗಳು ಮತ್ತು ಜಾಗತಿಕ ಹೂಡಿಕೆದಾರರ ನಡುವೆ ನೇರ ಸಂಪರ್ಕ ಕಲ್ಪಿಸಲಾಗುತ್ತಿದೆ. 3 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಸ್ಟಾರ್ಟಪ್’ಗಳ ಸರ್ವತೋಮುಖ ಅಭಿವೃದ್ಧಿ ಕುರಿತ ಜಾಗತಿಕ ಮಟ್ಟದ ತಜ್ಞರಿಂದ ವಿಶೇಷ ಚರ್ಚೆಗಳು, ಸಮಾಲೋಚನೆ ಸಭೆ, ಕಾರ್ಯಾಗಾರಗಳು ನಡೆಯಲಿವೆ.

ನವೋದ್ಯಮಿಗಳಿಗೆ ನವೀನ ತಂತ್ರಜ್ಞಾನಗಳ ಬಗ್ಗೆ ಮಾರ್ಗದರ್ಶನದ ಜೊತೆಗೆ ಉತ್ತಮ ಸ್ಟಾರ್ಟಪ್ ಗಳಿಗೆ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ.

'Bangalore Tech Summit' planned from tomorrow: Global level investors on one platform! ನಾಳೆಯಿಂದ `ಬೆಂಗಳೂರು ಟೆಕ್ ಸಮ್ಮಿಟ್’ ಆಯೋಜನೆ : ಒಂದೇ ವೇದಿಕೆಯಲ್ಲಿ ಜಾಗತಿಕ ಮಟ್ಟದ ಹೂಡಿಕೆದಾರರು!
Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.