ಚಿತ್ರದುರ್ಗ : ಚಾಲಕನ ಒಂದು ನಿರ್ಲಕ್ಷ್ಯದಿಂದ ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದ್ದ ಪರಿಣಾಮ, ಬಸ್ ನಲ್ಲಿದ್ದ ಸುಮಾರು 10 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ.
ಇಂದು ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಐಮಂಗಲ ಬಳಿ ಪಲ್ಟಿಯಾಗಿ ಸುಮಾರು 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷದಿಂದ ಬಸ್ ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದ ಕುರಿತಂತೆ ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.