ಬೆಂಗಳೂರು : ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆಯನ್ನು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಒಂದು ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮೈಲಸಂದ್ರ ಎಂಬಲ್ಲಿ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಮಹಿಳೆ ಅನುಮಾನಾಸ್ಪದ ರೀತಿ ಸಾವನ್ನಪ್ಪಿದ್ದು, ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ ಖಾಸಗಿ ಆಸ್ಪತ್ರೆಗೆ ಮಹಿಳೆಯನ್ನು ಪತಿ ಕರೆದೊಯ್ದಿದ್ದಾನೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಆಂಧ್ರಪ್ರದೇಶ ಮೂಲದ ದೀಪ (36) ಎನ್ನುವ ಮಹಿಳೆ ಸಾವನಪ್ಪಿದ್ದಾರೆ.
ಆದರೆ ಕುತ್ತಿಗೆಯಲ್ಲಿ ಯಾವುದೇ ಮಾರ್ಕ್ ಇರಲಿಲ್ಲ. ನಾಲಿಗೆ ಸಹ ಹೊರ ಬಂದಿಲ್ಲ. ದೀಪಾ ಮೂಗು ಹಾಗು ಬಾಯಲ್ಲಿ, ನೊರೆ ಬಂದಿದ್ದರಿಂದ ಇದೀಗ ಪತಿಯ ಮೇಲೆ ಅನುಮಾನ ಮೂಡುತ್ತಿದೆ. ಪತಿಯೇ ಹಲ್ಲೆ ಮಾಡಿ ಕೊಲೆಗೈದು ಬಳಿಕ ನೇಣಿಗೆ ಹಾಕಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರೋಪಿ ಪತಿ ಸುರೇಶನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.