ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಡೀ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಹಿಂದೆ ಮುಡಾದ ಆಯುಕ್ತರಾಗಿರುವಂತಹ ನಟೇಶ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ಹೌದು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಮುಡಾದ ಮಾಜಿ ಆಯುಕ್ತ ನಟೇಶ್ ಗೆ ಲೋಕಾಯುಕ್ತ ನೋಟಿಸ್ ನೀಡಿದೆ. ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಮೈಸೂರು ಲೋಕಾಯುಕ್ತ ಎಸ್ಪಿ ಟಿಜೆ ಉದೇಶ ಅವರು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬದಲಿ ನಿವೇಶನವನ್ನು ಮಾಜಿ ಆಯುಕ್ತ ನಟೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಆಯುಕ್ತ ನಟೇಶ್ ಗೆ ಲೋಕಾಯುಕ್ತ ನೋಟಿಸ್ ನೀಡಿದೆ.
ವಿಚಾರಣೆಗಾಗಿ ಮುಖ್ಯ ಕಾರ್ಯದರ್ಶಿಯ ಅನುಮತಿಯನ್ನು ಲೋಕಾಯುಕ್ತ ಎಸ್ಪಿ ಉದ್ದೇಶ ಕೇಳಿದ್ದರು. ಎರಡು ದಿನದ ಹಿಂದೆ ಸಿಎಸ್ ಅವರು ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಿದ್ದರು. ಈ ನೆಲೆಯಲ್ಲಿ ನಾಳೆ ವಿಚಾರಣೆಗೆ ಹಾಜರಾಗಿ ಎಂದು ಲೋಕಾಯುಕ್ತ ಎಸ್ಪಿ ಟಿಜೆ ಉದೇಶ ಅವರು ಮುಡಾ ಮಾಜಿ ಆಯುಕ್ತ ನಟೇಶ್ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.