ಉತ್ತರಕನ್ನಡ : ಶಾರ್ಟ್ ಸರ್ಕ್ಯೂಟ್ ನಿಂದ ಕ್ಲಿನಿಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಉತ್ತರ ಕನ್ನಡದಲ್ಲಿ ಕಾರವಾರ ತಾಲೂಕಿನ ಚಾರುಮತಿ ವುಮೆನ್ ವೆಲ್ತ್ ನಲ್ಲಿ ಈ ಒಂದು ಅವಘಡ ಸಂಭವಿಸಿದೆ.ಮಧ್ಯಾಹ್ನದ ನಂತರ ಕ್ಲಿನಿಕ್ ಅನ್ನು ಮುಚ್ಚಲಾಗಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಕ್ಲಿನಿಕ್ ನಲ್ಲಿದ್ದ ಎಸಿ, ರೆಫ್ರಿಜರೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಸ್ಥಳೀಯರು ಗಮನಿಸಿದ್ದಾರೆ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆಯಲ್ಲಿ ಕ್ಲಿನಿಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರೆಕಲಾಗಿವೆ.ಘಟನೆ ಕುರಿತಂತೆ ಕಾರವಾರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.