ಚಿತ್ರದುರ್ಗ: ಜಿಲ್ಲೆಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಇಬ್ಬರು ಅಕ್ರಮವಾಗಿ ನೆಲೆಸಿದ್ದಂತ ಬಾಂಗ್ಲಾದೇಶಿಗರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಂದು ಡಿವೈಎಸ್ಪಿ ನೇತೃತ್ವದಲ್ಲಿ ನಗರದಲ್ಲಿ ಗಾರ್ಮೆಂಟ್ಸ್ ಒಂದರ ಮೇಲೆ ದಾಳಿಯನ್ನು ನಡೆಸಲಾಗಿದೆ. ಈ ದಾಳಿಯಲ್ಲಿ 15 ಶಂಕಿತ ಬಾಂಗ್ಲಾ ನುಸುಳು ಕೋರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಚಿತ್ರದುರ್ಗ ಕೋಟೆ, ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಬಹುತೇಕರ ಬಳಿಯಲ್ಲಿ ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವಂತ ಆಧಾರ್ ಕಾರ್ಡ್ ಪತ್ತೆಯಾಗಿದೆ.
ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಗಾರು ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದು, ಇಬ್ಬರು ಅಕ್ರಮ ಬಾಂಗ್ಲಾದೇಶಿಗರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.