ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದಂತವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2024-25ನೇ ಸಾಲಿಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ ಎಂ.ಡಿ, ಎಂಎಸ್ ಕೋರ್ಸಿನ ಸೀಟುಗಳ ಶುಲ್ಕವನ್ನು ಹೆಚ್ಚಿಸಿ ಆದೇಶಿಸಿದೆ.
ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸು (ಎಂಡಿ/ಎಂಎಸ್)ಗಳ ಸೀಟು ಹಂಚಿಕೆ & ಶುಲ್ಕ ನಿಗಧಿಗೆ ಸಂಬಂಧಿಸಿದಂತೆ ಸರ್ಕಾರವು ರಾಜ್ಯದ ಖಾಸಗಿ ಕಾಲೇಜುಗಳ ಸಂಘಗಳಾದ ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘ (KRLMPCA)ಗಳೊಂದಿಗೆ ಪರಸ್ಪರ ಒಪ್ಪಂದದ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕಾಗಿದೆ. ಮೇಲೆ ಓದಲಾದ ನಡವಳಿಯಲ್ಲಿ 2024-25ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳೊಂದಿಗೆ ಪರಸ್ಪರ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ:12-06-2024ರಂದು ನಡೆದ ಸಭೆಯಲ್ಲಿ, ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳು ಶುಲ್ಕ ಹೆಚ್ಚಳ ಹಾಗೂ ಇನ್ನಿತರೆ ಕೆಲವು ಬೇಡಿಕೆಗಳನ್ನು ಸಲ್ಲಿಸಿರುತ್ತಾರೆ ಎಂದಿದ್ದಾರೆ.
ಅದರಂತೆ, ರಾಜ್ಯದ ಖಾಸಗಿ ಕಾಲೇಜುಗಳ ಸಂಘಗಳಾದ KPCF, KRLMPCA & AMPCK ರವರು ಸಲ್ಲಿಸಿರುವ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು 2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪ ಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘ(KRLMPCA)ರವರು ಸಹಿ ಮಾಡಿ ಸರ್ಕಾರಕ್ಕೆ ಸಲ್ಲಿಸಿರುವ ಪರಸ್ಪರ ಒಡಂಬಡಿಕೆಯಂತೆ ಸರ್ಕಾರಿ/ಖಾಸಗಿ ಕೋಟಾದ ಸೀಟುಗಳಿಗೆ ಅನ್ವಯಿಸುವಂತೆ ಶೇ.10ರಷ್ಟು ಪ್ರವೇಶ ಶುಲ್ಕವನ್ನು ಹೆಚ್ಚಿಸಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಸೀಟುಗಳಿಗೆ ಈ ಕೆಳಕಂಡ ಕೋಷ್ಟಕದಲ್ಲಿ ನಮೂದಿಸಿರುವಂತೆ ಶುಲ್ಕವನ್ನು ನಿಗಧಿಪಡಿಸಲು ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.
2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಿಗೆ ಸಂಬಂಧಿಸಿದಂತೆ, ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳು, ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘದ (KRLMPCA) ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳು ಹಾಗೂ ರಾಜ್ಯದ ಡೀಮ್ಸ್ ವಿಶ್ವವಿದ್ಯಾಲಯ ಮತ್ತು ಖಾಸಗಿ ವಿಶ್ವವಿದ್ಯಾಲಯದಡಿ ಬರುವ ವೈದ್ಯಕೀಯ ಕಾಲೇಜುಗಳಲ್ಲಿ 2024-25ನೇ ಸಾಲಿಗೆ ಪವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಿ ಕೆಳಕಂಡಂತೆ ನಿಗದಿಪಡಿಸಿ ಆದೇಶಿಸಲಾಗಿದೆ ಎಂದಿದ್ದಾರೆ.
ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸು(ಎಂಡಿ/ಎಂಎಸ್)ಗಳಿಗೆ 2024-25ನೇ ಸಾಲಿಗೆ ಪ್ರವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಿ ಈ ಕೆಳಕಂಡಂತೆ ನಿಗಧಿಪಡಿಸಲಾಗಿದೆ.
ಹೀಗಿದೆ ನೂತನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಎಂ.ಡಿ, ಎಂ.ಎಸ್ ಕೋರ್ಸ್ ಶುಲ್ಕ
- ಕ್ಲಿನಿಕಲ್ – ರೂ.1,00,000 ಇದ್ದ ಶುಲ್ಕವನ್ನು ರೂ.1,10,000ಕ್ಕೆ ಏರಿಕೆ ಮಾಡಲಾಗಿದೆ.
- ಪ್ಯಾರಾ ಕ್ಲಿನಿಕಲ್ ಕೋರ್ಸ್ ಶುಲ್ಕವನ್ನು ರೂ.50,000ದಿಂದ ರೂ.55,000ಕ್ಕೆ ಹೆಚ್ಚಿಸಲಾಗಿದೆ.
- ಪ್ರೀ ಕ್ಲಿನಿಕಲ್ ಕೋರ್ಸ್ ಶುಲ್ಕ ರೂ.25,000 ಇದ್ದದ್ದು ರೂ.27,500ಕ್ಕೆ ಏರಿಸಲಾಗಿದೆ.
ರಾಜ್ಯದಲ್ಲಿನ KPCF, KRLMPCA & AMPCK ಸಂಘಗಳಡಿಯಲ್ಲಿ ಬರುವ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಸೀಟುಗಳಿಗೆ 2024- 25ನೇ ಸಾಲಿಗೆ ಪುವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಿ ನಿಗಧಿಪಡಿಸಲಾದ ಶುಲ್ಕದ ವಿವರ:
ರಾಜ್ಯದಲ್ಲಿನ ಡೀಮ್ ವಿಶ್ವವಿದ್ಯಾನಿಲಯ ಮತ್ತು ಖಾಸಗಿ ವಿಶ್ವವಿದ್ಯಾಲಯದಡಿ ಬರುವ ವೈದ್ಯಕೀಯ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸ್ನಾತಕೋತ್ತರ ಕೋರ್ಸು(ಎಂ.ಡಿ/ಎಂ.ಎಸ್)ಗಳ ಸೀಟುಗಳಿಗೆ 2024-25ನೇ ಸಾಲಿಗೆ ಪ್ರವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಿ ನಿಗಧಿಪಡಿಸಲಾದ ಶುಲ್ಕದ ವಿವರ:
ವರದಿ: ವಸಂತ ಬಿ ಈಶ್ವರಗೆರೆ
BREAKING: ತುಮಕೂರಲ್ಲಿ ಧಾರುಣ ಘಟನೆ: ಕೆರೆಗೆ ಕಾಲುಜಾರಿ ಬಿದ್ದು ತಂದೆ ಮಗಳು ಸಾವು
‘ಒಂದೇ ದಿನದಲ್ಲಿ 5 ಲಕ್ಷ ನಾಗರಿಕರು ಪ್ರಯಾಣ’ : ಇತಿಹಾಸ ನಿರ್ಮಿಸಿದ ‘ಭಾರತೀಯ ವಾಯುಯಾನ’