ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ಇಂದು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ಲೋಕಾಯುಕ್ತ ವಿಚಾರಣೆಗೆ ಹಾಜರಾದರು. ನಿನ್ನೆ ಲೋಕಾಯುಕ್ತ ಎಸ್ ಪಿ ಟಿಜೆ ಉದೇಶ್ ರವರು ವಿಚಾರಣೆಗೆ ಹಾಜರಾಗುವಂತೆ ನಟೇಶ್ ಗೆ ನೋಟಿಸ್ ಜಾರಿ ಮಾಡಿದ್ದರು. ಹಾಗಾಗಿ ಇಂದು ನಟೇಶ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಹೌದು ಮೈಸೂರಿನಲ್ಲಿ ವಿಚಾರಣೆಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು ಲೋಕಾಯುಕ್ತ ನೋಟಿಸ್ ನೀಡಿದರಿಂದ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾದಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬದರಿ ನಿವೇಶನ ನೀಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಟೇಶ್ ವಿಚಾರಣೆಗಾಗಿ ಲೋಕಾಯುಕ್ತ ಮುಖ್ಯ ಕಾರ್ಯದರ್ಶಿಗಳ ಅನುಮತಿಯನ್ನು ಕೋರಿದ್ದರು.
ಕಳೆದ ಎರಡು ದಿನಗಳ ಹಿಂದೆ ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟೇಶ್ ಇಂದು ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.