ಬೆಂಗಳೂರು: ರಾಜ್ಯದಲ್ಲಿನ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆ ಬರೆಯೋದಕ್ಕೆ ಸಿದ್ಧತೆ ನಡೆಸುತ್ತಿರುವಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಹೊರಬಿದ್ದಿದೆ. ನಾಳೆ ಸಚಿವ ಮಧು ಬಂಗಾರಪ್ಪ ಉಚಿತ CET, NEET, JEE ತರಬೇತಿಗೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರದಿಂದಲೇ ಫ್ರೀ ಕೋಚಿಂಗ್ ನೀಡಲಾಗುತ್ತದೆ.
ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಜೆಟ್ ಅಯವ್ಯಯ ಕಂಡಿಕೆ 101ರಲ್ಲಿ ಘೋಷಿಸಿರುವಂತೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಸಿಇಟಿ, ನೀಟ್, ಜೆಇಇ ಆನ್ ಲೈನ್ ತರಬೇತಿಯನ್ನು ಆರಂಭಿಸುತ್ತಿರುವುದಾಗಿ ತಿಳಿಸಿದ್ದಾರೆ.
ದಿನಾಂಕ 20-11-2024ರಂದು ಬೆಳಿಗ್ಗೆ 10.30ಕ್ಕೆ ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಸಚಿವ ಮಧು ಎಸ್ ಬಂಗಾರಪ್ಪ ಅವರು ಈ ತರಬೇತಿಗೆ ವಿಧಾನಸೌಧದಲ್ಲಿ ಚಾಲನೆ ನೀಡಲಿದ್ದಾರೆ. ಆ ಬಳಿಕ ರಾಜ್ಯದಲ್ಲಿನ 25,000 ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತವಾದಂತ ತರಬೇತಿಯನ್ನು ಸಿಇಟಿ, ನೀಟ್, ಜೆಇಇ ಪರೀಕ್ಷೆಗೆ ಆನ್ ಲೈನ್ ಮೂಲಕ ನೀಡಲಾಗುತ್ತದೆ ಎಂದು ತಿಳಿಸಿದೆ.
BIG NEWS: ರಾಜ್ಯದಲ್ಲಿ ‘BPL ರೇಷನ್ ಕಾರ್ಡ್’ ರದ್ದಾಗುವ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್ | BPL Ration Card
ಕಾಂಗ್ರೆಸ್ ನಲ್ಲೂ ‘ಕಿಂಡರ್ ಗಾರ್ಡನ್’ ಪದ್ಧತಿ ಇದೆ : ಸಚಿವ ಸ್ಥಾನದ ಕುರಿತು ಶಾಸಕ ನರೇಂದ್ರ ಸ್ವಾಮಿ ಅಸಮಾಧಾನ
BREAKING : ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕ್ರಿಕೇಟರ್ ಸೂರ್ಯ ಕುಮಾರ ಯಾದವ್ ಭೇಟಿ, ಪೂಜೆ ಸಲ್ಲಿಕೆ