ನಾಗ್ಪುರ : ಇಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ನಾಗ್ಪುರದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ ಚಲಾಯಿಸಿದ್ದಾರೆ.
ನಾಗ್ಪುರದಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಾಗರಿಕರ ಕರ್ತವ್ಯ, ಪ್ರತಿಯೊಬ್ಬ ನಾಗರಿಕನೂ ಈ ಕರ್ತವ್ಯವನ್ನು ನಿರ್ವಹಿಸಬೇಕು. ನಾನು ಉತ್ತರಾಂಚಲದಲ್ಲಿದ್ದೆ, ಆದರೆ ನಾನು ನಿನ್ನೆ ರಾತ್ರಿ ಇಲ್ಲಿ ಮತ ಚಲಾಯಿಸಲು ಬಂದಿದ್ದೇನೆ. ಎಲ್ಲರೂ ಮತದಾನ ಮಾಡಬೇಕು ಎಂದು ಕರೆ ನೀಡಿದ್ದಾರೆ.
#WATCH | Nagpur, Maharashtra: RSS Chief Mohan Bhagwat says, "In a democracy, voting is a citizen's duty. Every citizen should perform this duty. I was in Uttaranchal, but I came here last night to cast my vote. Everyone should vote…"#MaharashtraAssemblyElections2024 https://t.co/TPje6eCYg2 pic.twitter.com/U6ePRamY7f
— ANI (@ANI) November 20, 2024
ಇಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಶಿವಸೇನೆ ಮತ್ತು ಎನ್‌ಸಿಪಿ ಕ್ರಮವಾಗಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಬಣಗಳಾಗಿ ವಿಭಜನೆಯಾದ ನಂತರ ಇದು ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. 2,086 ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 4,136 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದಲ್ಲಿ ಸುಮಾರು 9.70 ಕೋಟಿ ಮತದಾರರಿದ್ದಾರೆ.
ಬಿಜೆಪಿ 149, ಶಿವಸೇನೆ 81, ಎನ್‌ಸಿಪಿ 59 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ 101 ಅಭ್ಯರ್ಥಿಗಳು, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಎಸ್‌ಪಿ 237 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.