ಬೆಂಗಳೂರು : ರಾಜ್ಯದ ಬಡಜನತೆಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತವಾಗಬಾರದು. ಇದಕ್ಕಾಗಿ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಭಾರತ್ ಜೋಡೋ ಭವನದಲ್ಲಿರುವ ಇಂದಿರಾಗಾಂಧಿ ಅಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ. ರಾಜ್ಯದ ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತವಾಗಬಾರದು. ಇದಕ್ಕಾಗಿ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಕೆಲವು ಅನರ್ಹರು ಸೌಲಭ್ಯ ಪಡೆದುಕೊಂಡರೂ ಚಿಂತೆ ಇಲ್ಲ. ಅರ್ಹರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು. ಎಲ್ಲ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಸಿಗಬೇಕು. ಸರ್ಕಾರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿದೆ ಎಂದು ಮಾದ್ಯಮಗಳು ಬರೆದಿವೆ, ಆದರೆ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಸೂಚಿಸಲಾಗಿದೆ. ಎಲ್ಲಾ ಬಡವರಿಗೂ ಸೌಲಭ್ಯ ದೊರಕಬೇಕು. ಅನರ್ಹರಿಗೆ ಮಾತ್ರ ಎಪಿಎಲ್ ಕಾರ್ಡು ನೀಡಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.