ದಾವಣಗೆರೆ : ಇತ್ತೀಚಿಗೆ ಸರ್ಕಾರಿ ಸಿಬ್ಬಂದಿಗಳ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ದಾವಣಗೆರೆಯಲ್ಲಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರೊಬ್ಬರೂ ಜೀವನದಲ್ಲಿ ಜಿಗುಪ್ಸೆಗೊಂಡು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೌದು ದಾವಣಗೆರೆ ಮಹಾನಗರ ಪಾಲಿಕೆಯ ನೌಕರ ದಫೆದಾರ್ ಲಕ್ಷ್ಮಣ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅರುಣ ಸರ್ಕಲ್ ಬಳಿ ಚಲಿಸುತ್ತಿದ್ದ ರೈಲಿಗೆ ದಾವಣಗೆರೆ ಪಾಲಿಕೆಯ ಯುಜಿಡಿ ದಫೇದಾರ್ ಲಕ್ಷ್ಮಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಹಲವು ದಿನಗಳಿಂದ ಸರಿಯಾಗಿ ಕಚೇರಿಗೂ ಅವರು ಹೋಗಿರಲಿಲ್ಲ. ಜೀವನದಲ್ಲಿ ಜಿಗುಪ್ಸೆಗೊಂಡು ಲಕ್ಷ್ಮಣ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಆತ್ಮಹತ್ಯೆ ಕುರಿತಂತೆ ದಾವಣಗೆರೆ ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.