ಬೆಂಗಳೂರು : ರಾಜ್ಯ ಸರ್ಕಾರವು ಎಂಜಿನಿಯರ್, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಕೌಶಲ್ಯ ಹೆಚ್ಚಿಸಿ, ಉದ್ಯೋಗ ಕಲ್ಪಿಸಲು ನಿಪುಣ ಕರ್ನಾಟಕ ಯೋಜನೆ ಜಾರಿಗೆ ತರಲಾಗಿದೆ.
ರಾಜ್ಯ ಸರ್ಕಾರವು ವಿದ್ಯಾರ್ಥಿಗಳಲ್ಲಿ ಕೌಶಲವನ್ನು ಹೆಚ್ಚಿಸುವ ಸಲುವಾಗಿ ‘ನಿಪುಣ ಕರ್ನಾಟಕ’ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಈ ಕಾರ್ಯಕ್ರಮದ ಭಾಗವಾಗಿ ವಿಶ್ವದ ಐದು ತಂತ್ರಜ್ಞಾನ ದೈತ್ಯ ಕಂಪನಿಗಳ ಜೊತೆಗೆ ರಾಜ್ಯದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ಒಪ್ಪಂದ ಮಾಡಿಕೊಂಡಿದೆ.
ಎಂಜಿನಿಯರ್, ಡಿಪ್ಲೊಮಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಲ್ಲಿ ಕೌಶಲ ಹೆಚ್ಚಿಸುವ ಮೂಲಕ, ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಮತ್ತು ಅವರಲ್ಲಿ ಕನಿಷ್ಠ ಶೇ 70ರಷ್ಟು ಮಂದಿಗೆ ಉದ್ಯೋಗ ನೀಡುವ ಗುರಿಯನ್ನು ಒಳಗೊಂಡಿದೆ.