ಚಿಕ್ಕಬಳ್ಳಾಪುರ : ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚಿಕ್ಕಬಳ್ಳಾಪುರ ಅಪರ ಜಿಲ್ಲಾ ಸತ್ರ ನ್ಯಾಯಾಲಯದ FTSC-1 ಅಪರಾಧಿ ರಾಜು ಅಲಿಯಾಸ್ ದಾಸಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
ಚಿಕ್ಕಬಳ್ಳಾಪುರ ಅಪರ ಜಿಲ್ಲಾ ಸತ್ರ ನ್ಯಾಯಾಲಯ FTSC-1 ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. 2020ರಲ್ಲಿ ರಾಜು ಸ್ನೇಹಿತನ ಮಗಳನ್ನೇ ಅಪಹರಿಸಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಘಟನೆ ಕುರಿತಂತೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿತ್ತು.








