ಖಾಸಗಿ ಬಸ್ ವೊಂದು ಪಲ್ಟಿಯಾಗಿ ಘೋರ ದುರಂತವೊಂದು ಸಂಭವಿಸಿದ್ದು, 7 ಜನ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ.
ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪಾಟ್ನಾಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಈ ಮಾಹಿತಿ ನೀಡಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಗೋರ್ಹರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಸ್ತೆಯಲ್ಲಿ ತಿರುಗುತ್ತಿದ್ದಾಗ ಬಸ್ ಪಲ್ಟಿಯಾಗಿದೆ. ಹಜಾರಿಬಾಗ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಅರವಿಂದ್ ಕುಮಾರ್ ಸಿಂಗ್ ತಿಳಿಸಿದ್ದಾರೆ,
ಇದುವರೆಗೆ ಏಳು ಸಾವುಗಳು ದೃಢಪಟ್ಟಿವೆ.” ಇನ್ನು ಕೆಲವರು ಬಸ್ಸಿನಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು. ಬಸ್ ಕೋಲ್ಕತ್ತಾದಿಂದ ಪಾಟ್ನಾಗೆ ಹೋಗುತ್ತಿತ್ತು. ಸದ್ಯ ಗಾಯಗೊಂಡಿರುವ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.