Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರ, ಡಿಜಿಟಲ್ ವ್ಯಸನ ಅಪಾಯಕಾರಿ.! ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

11/02/2026 10:05 PM

ನಿಮ್ಮ ಬ್ಯಾಂಕ್ ನಿಮಗೆ ಪಾಲಿಸಿಯನ್ನ ತಪ್ಪಾಗಿ ಮಾರಾಟ ಮಾಡಿದ್ಯಾ? ಚಿಂತಿಸ್ಬೇಡಿ, 100% ಮರುಪಾವತಿಗೆ ‘RBI’ ಆದೇಶ!

11/02/2026 9:31 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸದನ ಆರಂಭಕ್ಕೆ ಮುನ್ನ ರೇಷನ್‌ ಕಾರ್ಡ್‌ ವಾಪಸ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ: ಆರ್‌.ಅಶೋಕ ಎಚ್ಚರಿಕೆ
KARNATAKA

ಸದನ ಆರಂಭಕ್ಕೆ ಮುನ್ನ ರೇಷನ್‌ ಕಾರ್ಡ್‌ ವಾಪಸ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ: ಆರ್‌.ಅಶೋಕ ಎಚ್ಚರಿಕೆ

By kannadanewsnow0921/11/2024 3:17 PM

ಬೆಂಗಳೂರು: ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್‌ ಕಾರ್ಡ್‌ ವಾಪಸ್‌ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದರು.

ಜಯನಗರದ ಅರಸು ಕಾಲೋನಿಯಲ್ಲಿ ರೇಷನ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿದರು.

ನಂತರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ. ಅನ್ನವನ್ನು ಕದ್ದು ಲಕ್ಷಾಂತರ ಜನರಿಗೆ ಅನ್ಯಾಯ ಮಾಡಿದ್ದಾರೆ. ಅರಸು ಕಾಲೋನಿಯಲ್ಲಿ 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆ, ಈಗ ಅರ್ಹತೆ ಕಳೆದುಕೊಂಡಿದ್ದಾರೆ. ಅಂಕಿ ಅಂಶದ ಪ್ರಕಾರ, 250 ಸರ್ಕಾರಿ ನೌಕರರ ಬಳಿ ರೇಷನ್‌ ಕಾರ್ಡ್‌ ಇದ್ದರೂ, 12 ಲಕ್ಷ ಜನರ ಕಾರ್ಡ್‌ ರದ್ದು ಮಾಡಲು ಸರ್ಕಾರ ಮುಂದಾಗಿದೆ. ಏನೂ ಭಯ ಬೇಡವೆಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಆಹಾರ ಸಚಿವರು ಮತ್ತೆ ಅರ್ಜಿ ಹಾಕಿ ಎಂದು ಹೇಳುತ್ತಾರೆ. ಕಾಂಗ್ರೆಸ್‌ ನಾಯಕರು ತಪ್ಪು ಮಾಡಿದ ಮೇಲೆ ಜನರು ಯಾಕೆ ಮರಳಿ ಅರ್ಜಿ ಹಾಕಬೇಕು? ಎಂದು ಪ್ರಶ್ನೆ ಮಾಡಿದರು.

ಮರಳಿ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ ಒಂದು ಕಾರ್ಡ್‌ಗೆ 10-15 ಸಾವಿರ ರೂ. ಲಂಚ ನೀಡಬೇಕಾಗುತ್ತದೆ. ಯಾರೂ ಅರ್ಜಿ ಹಾಕಬಾರದು, ಸರ್ಕಾರವೇ ಮರಳಿ ರೇಷನ್‌ ಕಾರ್ಡ್‌ ಕೊಡಬೇಕು. ದೇವಸ್ಥಾನದ ಮುಂದೆ ಹೂ ಮಾರುವವರು, ಸೊಪ್ಪು ಮಾರುವವರ ರೇಷನ್‌ ಕಾರ್ಡ್‌ ರದ್ದುಪಡಿಸಲಾಗಿದೆ. ಇದರ ವಿರುದ್ಧ ಸದನದಲ್ಲಿ ಹಾಗೂ ಹೊರಗೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.

ಏಕಾಏಕಿ ರೇಷನ್‌ ಕಾರ್ಡ್‌ ರದ್ದು ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಖಾಲಿಯಾಗಿದ್ದು, ರಸ್ತೆ ಗುಂಡಿ ಮುಚ್ಚಲು ಕೂಡ ಹಣವಿಲ್ಲ. 20-30 ಸಾವಿರ ಕೋಟಿ ರೂ. ಉಳಿಸಿ, ಶಾಸಕರ ಬಂಡಾಯ ಶಮನಕ್ಕೆ ಬಳಸಲಾಗುತ್ತದೆ ಎಂದು ದೂರಿದರು.

ಸಚಿವರ ಮನೆ ಆಧುನೀಕರಣಕ್ಕೆ 40-50 ಕೋಟಿ ರೂ., ಸಿಎಂ ಮನೆ ನವೀಕರಣಕ್ಕೆ 2 ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಬಡ ಜನರಿಗೆ ಅಕ್ಕಿ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಕೆ.ರಾಮಮೂರ್ತಿ ಉಪಸ್ಥಿತರಿದ್ದರು.

ಅನ್ನ, ಆರೋಗ್ಯದಲ್ಲಿ ಮೋಸ

ಇದೇ ವೇಳೆ ಆರ್‌.ಅಶೋಕ ಅವರು ಸಂಜಯಗಾಂಧಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಕಳೆದ 16 ತಿಂಗಳಲ್ಲಿ ಜನರ ತಲೆಗೆ ಚಪ್ಪಡಿ ಎಳೆಯುವ ಕೆಲಸ ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಹಣ ಕೊರತೆಯಿಂದಾಗಿ ಔಷಧಿ ಖರೀದಿ ಸಾಧ್ಯವಾಗುತ್ತಿಲ್ಲ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನುದಾನ ಕಡಿತ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ವಹಣೆಗೂ ಹಣವಿಲ್ಲ. ಇದಕ್ಕಾಗಿ ಸೇವಾ ಶುಲ್ಕವನ್ನು ಏರಿಸಲಾಗಿದೆ. ಅನ್ನ ಮತ್ತು ಆರೋಗ್ಯದ ವಿಚಾರದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ದೂರಿದರು.

ಒಂದು ಕಡೆ ಜಮೀನು ಹೋಗುತ್ತಿದೆ, ಮತ್ತೊಂದು ಕಡೆ ರೇಷನ್‌ ಕಾರ್ಡ್‌ ಹೋಗುತ್ತಿದೆ, ಈಗ ಉಚಿತ ಆರೋಗ್ಯವೂ ದೊರೆಯುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಶುಲ್ಕಗಳನ್ನು ಹೆಚ್ಚು ಮಾಡಿರುವುದೇ ಖಜಾನೆ ಖಾಲಿಯಾಗಿರುವುದಕ್ಕೆ ಸಾಕ್ಷಿ. ಐದು ಗ್ಯಾರಂಟಿಗಳಿಗಾಗಿ ಜನರ ಮೇಲೆ ತೆರಿಗೆ ಹೊರೆ ಹಾಕಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರ ಪ್ರಕಾರ ಇದು ಬಡವರ ಪರವಾದ ಸರ್ಕಾರವೇ? ಎಂದು ಪ್ರಶ್ನಿಸಿದರು.

ಮುಡಾ ಹಗರಣದ ನಂತರ ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡು ಜನರ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಲಂಚ ಇದ್ದರೆ ಮಾತ್ರ ವಿಧಾನಸೌಧಕ್ಕೆ ಪ್ರವೇಶ ಎಂಬ ಸ್ಥಿತಿ ಇದೆ. ಆರೋಗ್ಯ ಸೇವೆಯನ್ನು ಸಂಪೂರ್ಣ ಉಚಿತವಾಗಿ ನೀಡಬೇಕು. ಇದರ ಮೇಲೂ ಸರ್ಕಾರ ವಕ್ರದೃಷ್ಟಿ ಬೀರಿದೆ ಎಂದು ಆಕ್ರೋಶ ಹೊರಹಾಕಿದರು.

‘BPL ಕಾರ್ಡ್ ರದ್ದು’ ಗೊಂದಲದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು.? – Kannada News | India News | Breaking news | Live news | Kannada | Kannada News | Karnataka News | Karnataka News

BIG NEWS: ‘ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ’ದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’ – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ ವರ್ಗಾವಣೆ | DYSP Transfer

11/02/2026 9:05 PM1 Min Read

ಮುರುಗನ ಆರಾಧನೆಯ ಹಿಂದೆ ಇಂಥದ್ದೊಂದು ರಹಸ್ಯ ಅಡಗಿದೆ

11/02/2026 8:51 PM2 Mins Read
Recent News

ಎಚ್ಚರ, ಡಿಜಿಟಲ್ ವ್ಯಸನ ಅಪಾಯಕಾರಿ.! ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

11/02/2026 10:05 PM

ನಿಮ್ಮ ಬ್ಯಾಂಕ್ ನಿಮಗೆ ಪಾಲಿಸಿಯನ್ನ ತಪ್ಪಾಗಿ ಮಾರಾಟ ಮಾಡಿದ್ಯಾ? ಚಿಂತಿಸ್ಬೇಡಿ, 100% ಮರುಪಾವತಿಗೆ ‘RBI’ ಆದೇಶ!

11/02/2026 9:31 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM

BREAKING : ಸಲ್ಮಾನ್ ಖಾನ್ ಸೋದರ ಮಾವ ‘ಆಯುಷ್ ಶರ್ಮಾ’ಗೆ ಬಿಷ್ಣೋಯ್ ಗ್ಯಾಂಗ್’ನಿಂದ ಬೆದರಿಕೆ ಇಮೇಲ್ : ವರದಿ

11/02/2026 9:18 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

By kannadanewsnow0911/02/2026 9:19 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಮೇಜರ್ ಸರ್ಜರಿ ಮಾಡಲಾಗಿದೆ. ಬರೋಬ್ಬರಿ 23 ಡಿವೈಎಸ್ಪಿ ಹಾಗೂ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ ವರ್ಗಾವಣೆ | DYSP Transfer

11/02/2026 9:05 PM

ಮುರುಗನ ಆರಾಧನೆಯ ಹಿಂದೆ ಇಂಥದ್ದೊಂದು ರಹಸ್ಯ ಅಡಗಿದೆ

11/02/2026 8:51 PM

ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ.ಶಿವಕುಮಾರ್‌

11/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.