ಬೆಂಗಳೂರು : ವ್ಯಕ್ತಿಯೊಬ್ಬರಿಗೆ ಮಹಿಳೆಯೊಬ್ಬಳು ಖಾಸಗಿ ಫೋಟೋ ಕಳುಹಿಸಿ, ಹನಿಟ್ರ್ಯಾಪ್ ಮೂಲಕ 2 ಕೋಟಿಗೂ ಅಧಿಕ ರೂಪಾಯಿ ಹಣ ವಸೂಲಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹನಿ ಟ್ರ್ಯಾಪ್ ಮಾಡಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ಸರ್ಕಾರಿ ಸಂಸ್ಥೆಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ 2.5 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಲಾಗಿದ್ದು, ಬಂಧಿತ ಆರೋಪಿಗಳನ್ನು ತಬ್ಸಂ ಬೇಗಂ, ಅಜೀಮ್ ಉದ್ದಿನ್, ಆನಂದ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ವಂಚನೆಗೆ ಒಳಗಾದ ವ್ಯಕ್ತಿಯನ್ನು ಜಿಮ್ ಒಂದರಲ್ಲಿ ಆರೋಪಿ ತಬ್ಸಂ ಬೇಗಂ ಪರಿಚಯ ಮಾಡಿಕೊಂಡಿದ್ದಳು.
ಮಗುವನ್ನು ದತ್ತು ಪಡೆದುಕೊಳ್ಳುವ ವಿಚಾರವಾಗಿ ಆರೋಪಿಯು, ವ್ಯಕ್ತಿಗೆ ಹತ್ತಿರವಾಗಿ ವಾಟ್ಸಪ್ ಮೂಲಕ ಚಾಟಿಂಗ್ ಆರಂಭಿಸಿದ್ದಾರೆ. ಈ ವೇಳೆ ಖಾಸಗಿ ಫೋಟೋಗಳನ್ನು ಮಹಿಳೆ ಕಳುಹಿಸಿದ್ದಾಳೆ. 2021 ರಿಂದ ಇಲ್ಲಿಯವರೆಗೂ ಬೆದರಿಸಿ ಹಂತಹಂತವಾಗಿ 2.5 ಕೋಟಿಯವರೆಗೂ ಹಣ ವಸೂಲಿ ಮಾಡಿದ್ದಾರೆ. ಇದೀಗ ವ್ಯಕ್ತಿ ಸಿಸಿಬಿಗೆ ಈ ಕುರಿತು ದೂರು ನೀಡಿದ್ದು, ಸಿಸಿಬಿ ಪೊಲೀಸರು ಆರೋಪಗಳನ್ನು ಅವಶ್ಯಕ ಪಡೆದು ವಿಚಾರಣೆ ಕೈಗೊಂಡಿದ್ದಾರೆ.