ಬೆಂಗಳೂರು : ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದ ರಾಜ್ಯ ಸರ್ಕಾರ ಇದೀಗ, ಜನರ ಆಕ್ರೋಶಕ್ಕೆ ಮಣಿದು, ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದೆ. ಹೀಗಾಗಿ ಬಿಪಿಎಲ್ ಕಾರ್ಡ್ ದಾರರು ತಮ್ಮ ಕಾರ್ಡ್ ಗಳನ್ನು ಸರಿಪಡಿಸಿಕೊಳ್ಳಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎದುರು ಸಾಲುಗಟ್ಟಿ ನಿಂತಿದ್ದಾರೆ.
ಹೌದು ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಿಲ್ಲಿಸಿದ ರಾಜ್ಯ ಸರ್ಕಾರ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಇದೀಗ ಬಿಪಿಎಲ್ ಕಾರ್ಡ್ ಪರಿಷ್ಕರಣೆಯನ್ನು ಸ್ಥಗಿತಗೊಳಿಸಲಾಗಿದೆ. ರದ್ದಾಗಿರುವ ಕಾರ್ಡ್ ಲಿಸ್ಟ್ ಪಡೆದು ಸರಿಪಡಿಸಲು ಸೂಚನೆ ನೀಡಲಾಗಿದೆ. ಒಂದು ವಾರದಲ್ಲಿ ಕಾರ್ಡ್ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ.
ಹಾಗಾಗಿ ಇದೀಗ ರದ್ದಾಗಿರುವ ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳು ದಾಖಲೆಗಳನ್ನು ತೆಗೆದುಕೊಂಡು ತಮ್ಮ ಕಾರ್ಡ್ ಗಳನ್ನು ಸರಿಪಡಿಸಿಕೊಳ್ಳುತ್ತಿರುವ ಫಲಾನುಭವಿಗಳು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳತ್ತ ಫಲಾನುಭವಿಗಳು ತೆರಳುತ್ತಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳ ಆವರಣದಲ್ಲಿ ಇದೀಗ ಜನಜಂಗುಳಿ ಕಂಡುಬಂದಿದೆ.