ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಹಗರಣದ ಶೀಘ್ರ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲು ಸಿಬಿಐ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಸಿಬಿಐಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಈ ಕುರಿತಂತೆ ಬಿಜೆಪಿಯ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿ ಹೊಳಿ, ಅರವಿಂದ ಲಿಂಬಾವಳಿ ಮತ್ತು ಕುಮಾರ್‌ಬಂಗಾರಪ್ಪ ಸಲ್ಲಿಸಿರುವ ಅರ್ಜಿ ಗುರುವಾರ ನ್ಯಾ| ಎಂ.ನಾಗ ಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಗೆ ನಡೆಸಿತು.ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಸಿಬಿಐಗೆ ನೋಟಿಸ್ ಜಾರಿ ಗೊಳಿಸಿ ವಿಚಾರಣೆ ಮುಂದೂಡಿದೆ.
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಪಿ.ವೆಂಕಟೇಶ್ ದಳವಾಯಿ ವಾದ ಮಂಡಿಸಿ, ದುರ್ಬಲ ವರ್ಗದವರಿಗೆ ಮೀಸ ಲಿಟ್ಟ ಹಣವನ್ನು ಲೂಟಿ ಮಾಡಲಾಗಿದೆ. ಸಿಬಿಐ ಎಫ್‌ಐಆ ದಾಖಲಿಸಿಕೊಂಡು 5 ತಿಂಗಳಾಗಿವೆ. ತನಿಖೆ ನಡೆಸಿಲ್ಲ. ಇಂತಹ ಪ್ರಕರಣದಲ್ಲಿ ರಾಜಕಾರಣಿಗಳು ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಸೂಕ್ತ ರೀತಿ ಯಲ್ಲಿ ತನಿಖೆ ನಡೆಸಬೇಕಾದರೆ ನ್ಯಾಯಾ ಲಯವು ಮೇಲ್ವಿಚಾರಣೆ ನಡೆಸುವ ಅಗತ್ಯವಿದೆ.
ತನಿಖೆಯಲ್ಲಿ ಹಸ್ತ ಕ್ಷೇಪ ಮಾಡದೆ ಮೇಲ್ವಿಚಾರಣೆ ಮಾಡುವುದಕ್ಕೆ ಹೈಕೋ ಟ್ ೯ಗೆ ಅಧಿಕಾರವಿದೆ ಎಂದು ವಿವರಿಸಿದರು. ಎಫ್‌ಐಆರ್ ಸಂಬಂಧ ಶೀಘ್ರ ತನಿಖೆ ನಡೆಸಿ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಹಾಗೂ 15 ದಿನಗಳಿಗೊಮ್ಮೆ ಹೈಕೋರ್ಟ್‌ಗೆ ತನಿಖಾ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸುವಂತೆ ಕೋರಿದರು.