ರಾಮನಗರ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತ ಎಣಿಕೆ ಆರಂಭವಾಗಿದ್ದು, ಮೂರೂ ಕ್ಷೇತ್ರಗಳ ಪೈಕಿ ಅತ್ಯಂತ ಪ್ರಮುಖ ಹಾಗೂ ಕುತೂಹಲ ಮೂಡಿಸುವಂತಹ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ಧ ಮೊದಲ ಸುತ್ತಿನಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಅದೇ ರೀತಿಯಾಗಿ ಸಂಡೂರು ವಿಧಾನಸಭಾ ಉಪಚುನಾವಣೆಯ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಏನೋ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭಾರತ್ ಬೊಮ್ಮಾಯಿ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಣ ಅವರ ವಿರುದ್ಧ ಆರಂಭಿಕ ಮುನ್ನಡೆಯನ್ನು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ನಾನು ಪ್ರಾರಂಭದಲ್ಲಿ ಚುನಾವಣೆ ಕಣದ ಬಳಿಕ ಒಂದು ಮಾತನ್ನು ಹೇಳಿದ್ದೆ ನನಗೆ ಆತ್ಮವಿಶ್ವಾಸವಿದೆ. ಚನ್ನಪಟ್ಟಣದಲ್ಲಿ ಜನರು ಆಶೀರ್ವಾದ ಮಾಡುತ್ತಾರೆ ಎಂದು ನಂಬಿಕೆ ಇದೆ. ಹಳ್ಳಿಗಳ ಪ್ರವಾಸ ಮಾಡಿದಾಗ ಹಾಗೂ ಹಳೆಯ ತಾಯಂದಿರು ಯುವಕರು ಮತ್ತು ಹಿರಿಯರು 18 ದಿನಗಳ ಕಾಲ ಚುನಾವಣಾ ಸಂದರ್ಭದಲ್ಲಿ ಅತ್ಯಂತ ಆತ್ಮವಿಶ್ವಾಸ ಮೂಡಿಸಿದೆ ಚನ್ನಪಟ್ಟಣ ಜನತೆ ಆಗಮಿಸುವ ಕೆ ಯಾವುದೇ ಕೊರತೆ ಇಲ್ಲ.ಜನ ಈ ಬಾರಿ ಅವಕಾಶ ನೀಡುತ್ತಾರೆ ಎಂದು ನಂಬಿದ್ದೇನೆ ಎಂದರು.