ಬೆಂಗಳೂರು : ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ಆರಂಭವಾಗಿದ್ದು, ಈಗಾಗಲೇ ಮಹಾಯುತಿಯು ಮ್ಯಾಜಿಕ್ ನಂಬರ್ ದಾಟಿದ್ದು ಇನ್ನು ಮಹಾವಿಕಾಸ್ ಅಘಾಡಿಯು 112 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಒಂದು ಟಾಸ್ಕ್ ನೀಡಿದ್ದು ಆಪರೇಷನ್ ತಡೆಯುವ ನಿಟ್ಟಿನಲ್ಲಿ ಮುಂಬೈಗೆ ತೆರಳಿ ಎಂದು ಸೂಚನೆ ನೀಡಿದೆ.
ಎಂವಿಎ ಶಾಸಕರನ್ನು ರಾಜ್ಯಕ್ಕೆ ಕರೆ ತರುವ ಸಾಧ್ಯತೆ ಇದ್ದು, ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಪ್ರತ್ಯೇಕವಾಗಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಸಂಜೆ ನಾಲ್ಕು ಗಂಟೆಯೊಳಗೆ ಮುಂಬೈಯಲ್ಲಿ ಇರುವಂತೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದೆ. ಫಲಿತಾಂಶದ ಬಳಿಕ ಆಪರೇಷನ್ ತಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಇದೊಂದು ಪ್ರಮುಖ ಟಾಸ್ಕ್ ನೀಡಿದೆ.
ರಾಜ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಗೆ ಕಾಂಗ್ರೆಸ್ ಹೈಕಮಾಂಡ್ ಈ ಒಂದು ಜವಾಬ್ದಾರಿ ವಹಿಸಿದ್ದು, ಯಾವುದೇ ಕಾರಣಕ್ಕೂ ಆಪರೇಷನ್ ಆಗದಂತೆ ತಡೆಯಲು ವಿಶೇಷ ಟಾಸ್ಕ್ ಹೈಕಮಾಂಡ್ ಇಬ್ಬರು ನಾಯಕರಿಗೆ ನೀಡಿದೆ. ಹಾಗಾಗಿ ಇಂದು ಸಂಜೆಯೊಳಗೆ ಮುಂಬೈಗೆ ತೆರಳಿ ಎಂದು ಹೈಕಮಾಂಡ್ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಇದೀಗ ಕಾಂಗ್ರೆಸ್ ನಾಯಕರು ಮುಂಬೈಗೆ ತೆರಳಿದ್ದಾರೆ.