ಬೆಂಗಳೂರು: ಕರ್ನಾಟಕ ಮಿನಿ ಸಮರದಲ್ಲಿ ಮತದಾನೋತ್ತರ ಸಮೀಕ್ಷೆಗಳು ಉಲ್ಟಾ ಆಗಿದ್ದಾವೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮಾತ್ರ ಗೆಲ್ಲಲಿದೆ ಎನ್ನುವಂತ ಸಮೀಕ್ಷಾ ವರದಿಯೇ ಸುಳ್ಳಾಗಿದೆ. ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರಕ್ಕೆ ಮೂರು ಗೆದ್ದುಕೊಳ್ಳುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.
ಕರ್ನಾಟಕದ ಮೂರು ಉಪ ಚುನಾವಣೆಯ ಮತದಾನದ ನಂತ್ರ ಮತದಾನೋತ್ತರ ಚುನಾವಣಾ ಸಮೀಕ್ಷೆಗಳು ಪ್ರಕಟವಾಗಿದ್ದವು. ಪಿ-ಮಾರ್ಕ್ಸ್ ಸಮೀಕ್ಷೆಯಂತೆ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್, ಇನ್ನೆರಡು ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವುದಾಗಿ ತಿಳಿಸಿತ್ತು.
ಇನ್ನೂ ಹಿರಿಯ ವಾರ್ತಾ ವಾಚಕ ರಾಘವೇಂದ್ರ ಗಂಗಾವತಿ ಅವರ ಸಾರಥ್ಯದ ಚಾಣಕ್ಯ ಟೈಮ್ಸ್ 24X7 ಸಮೀಕ್ಷೆ ಕೂಡ ಪ್ರಕಟವಾಗಿದೆ. ಅದರಲ್ಲಿ ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವಂತ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಅಂತ ಹೇಳಿತ್ತು.
ಹಾವೇರಿಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಗೆಲ್ಲಲಿದ್ದಾರೆ. ಶಿಗ್ಗಾವಿ ಬಿಜೆಪಿ ಪಾಲಾಗುವುದಾಗಿ ಚಾಣಕ್ಯ ಟೈಮ್ಸ್ ಸಮೀಕ್ಷಾ ವರದಿ ತಿಳಿಸಲಾಗಿತ್ತು.
ಬಳ್ಳಾರಿಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವು ಸಾಧಿಸುವುದಾಗಿಯೂ ರಾಘವೇಂದ್ರ ಗಂಗಾವತಿ ಅವರ ಸಾರಥ್ಯದ ಚಾಣಕ್ಯ ಟೈಮ್ಸ್ 24X7 ಚಾನಲ್ ಸಮೀಕ್ಷೆಯು ಹೇಳಿತ್ತು.
ಆದರೇ ಇಂದು ಮತಏಣಿಕೆಯ ನಂತ್ರ ಈ ಸಮೀಕ್ಷೆಗಳೆಲ್ಲ ಸುಳ್ಳಾಗಿಸಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್, ಸಂಡೂರಲ್ಲಿ ಅನ್ನಪೂರ್ಣ ಹಾಗೂ ಶಿಗ್ಗಾಂವಿಯಲ್ಲಿ ಯಾಸೀರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಕಂಡು, ಭಾರೀ ಮುಖಭಂಗವೇ ಬಿಜೆಪಿ ಮುಖಂಡರಿ ಆಗಿದೆ.
BREAKING: ಮತದಾರರ ತೀರ್ಪಿಗೆ ನಾನು ತಲೆಬಾಗಿದ್ದೇನೆ: ಚನ್ನಪಟ್ಟಣದಲ್ಲಿ ಸೋಲಿನ ಬಳಿಕ ನಿಖಿಲ್ ಫಸ್ಟ್ ರಿಯಾಕ್ಷನ್
ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS