ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್, ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಪಠಾಣ್ ಹಾಗೂ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅಭೂತಪೂರ್ವಕವಾಗಿ ಬೆಂಬಲಿಸಿದ ಕರ್ನಾಟಕ ಜನತೆಗೆ ಸಚಿವ ಪ್ರಿಯಾಂಕ್ ಖರ್ಗೆ ಧನ್ಯವಾದಗಳನ್ನು ಹೇಳಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು. ಈ ಉಪ ಚುನಾವಣೆಯ ಅಭೂತಪೂರ್ವ ಫಲಿತಾಂಶವು ನಮ್ಮ ಸರ್ಕಾರದ ಜನಪರ ಆಡಳಿತಕ್ಕೆ, ಅಭಿವೃದ್ಧಿಪರ ನೀತಿಗೆ ಹಾಗೂ ಜನರ ಬದುಕನ್ನು ಬದಲಿಸಿದ ಗ್ಯಾರಂಟಿ ಯೋಜನೆಗಳ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ. ಈ ಉಪ ಚುನಾವಣೆಯ ಗೆಲುವು ನಮ್ಮ ಸರ್ಕಾರಕ್ಕೆ ಮತ್ತಷ್ಟು ಬಲ ನೀಡಿದೆ, ಇನ್ನಷ್ಟು ಜನಹಿತದ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರೇರಣೆ ಮತ್ತು ಚೈತನ್ಯವನ್ನು ನೀಡಿದೆ ಎಂದಿದ್ದಾರೆ.
ಕರ್ನಾಟಕದ ಪ್ರಬುದ್ಧ ಹಾಗೂ ಪ್ರಜ್ಞಾವಂತ ಮತದಾರರು ಪ್ರಗತಿ, ಶಾಂತಿ, ಸೌಹಾರ್ದತೆಯನ್ನು ಬಯಸುತ್ತಾರೆ, ಭವಿಷ್ಯ ರೂಪಿಸುವ ಉದ್ಯೋಗ ಸೃಷ್ಟಿಯನ್ನು ಬಯಸುತ್ತಾರೆಯೇ ಹೊರತು ಕೋಮುವಾದವನ್ನಲ್ಲ ಎಂಬ ಸಂದೇಶವನ್ನು ಮತ್ತೊಮ್ಮೆ ಈ ಚುನಾವಣೆಯ ಮೂಲಕ ನೀಡಿದ್ದಾರೆ ಎಂದು ಹೇಳಿದ್ದಾರೆ.
ಉಪ ಚುನಾವಣೆಯಲ್ಲಿ ಹಗಲು ರಾತ್ರಿ ಎನ್ನದೆ ಅತ್ಯಂತ ಉತ್ಸಾಹದಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೆ, ನಾಯಕರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳು ಅಂತ ತಿಳಿಸಿದ್ದಾರೆ.
ಜನಾಶೀರ್ವಾದ ಪಡೆದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು, ಸರ್ಕಾರದ ಜನಹಿತದ ಯೋಜನೆಗಳನ್ನು ತಮ್ಮ ಕ್ಷೇತ್ರಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದಕ್ಕೆ ಶ್ರಮಿಸುತ್ತೀರಿ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ.
ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು.
ಈ ಉಪ ಚುನಾವಣೆಯ ಅಭೂತಪೂರ್ವ ಫಲಿತಾಂಶವು ನಮ್ಮ ಸರ್ಕಾರದ ಜನಪರ ಆಡಳಿತಕ್ಕೆ, ಅಭಿವೃದ್ಧಿಪರ ನೀತಿಗೆ ಹಾಗೂ ಜನರ ಬದುಕನ್ನು ಬದಲಿಸಿದ ಗ್ಯಾರಂಟಿ ಯೋಜನೆಗಳ ಯಶಸ್ಸಿಗೆ ಹಿಡಿದ… pic.twitter.com/tUrm64hvj4
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 23, 2024
‘ಬಿಜೆಪಿ ಕ್ಷುಲ್ಲಕ ರಾಜಕಾರಣ’ಕ್ಕೆ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ: ಸಚಿವ ದಿನೇಶ್ ಗುಂಡೂರಾವ್
ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS