ಬೆಂಗಳೂರು: ನಾನು ಮಂತ್ರಿ ಆಗಿ 40 ವರ್ಷ ಆಯ್ತು. ಎರಡು ಬಾರಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆಗಿದ್ದೇನೆ. ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ. ಜನ ಅವಕಾಶ ಕೊಟ್ಟಾಗ ಅಧಿಕಾರ ನಡೆಸಿದ್ದೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ನಾವು ಸೋತಾಗ ಹೋರಾಟ ಮಾಡಿದ್ದೇವೆ. ಸಾಲದ್ದಕ್ಕೆ ದೇವೇಗೌಡರು, ಕುಮಾರಸ್ವಾಮಿ ಅವ್ರು, ನಿಖಿಲ್ ಎಲ್ರೂ ಅಳೋದು. ಅಳೋದನ್ನು ರೂಢಿ ಮಾಡಿಕೊಂಡಿದ್ದಾರೆ. ಆದ್ರೂ ಜನ ನಮಗೆ ಮತ ಹಾಕಿದ್ದಾರೆ. ಬಿಜೆಪಿಯವರು ಮತದಾರರನ್ನು ಪೆದ್ದರು ಎಂದು ಭಾವಿಸುವುದನ್ನು ನಿಲ್ಲಿಸಬೇಕು. ಪ್ರತೀ ಬಾರಿ ಮತದಾರರನ್ನು ಬಕ್ರಾ ಮಾಡಿ ಗೆಲ್ತೀವಿ ಎನ್ನುವ ಬುದ್ದಿಯನ್ನು ಬಿಜೆಪಿಯವರು ಬಿಡಬೇಕು ಎಂದರು.
ಈ ಬಾರಿ ಬಿಜೆಪಿ, ಜೆಡಿಎಸ್ ಇಬ್ಬರೂ ಸೇರಿ ಅಪಪ್ರಚಾರ ಮಾಡಿದ್ರು. ಇಬ್ಬರೂ ಒಟ್ಟಾಗಿ ಚುನಾವಣೆ ಮಾಡಿದ್ರು. ಪಾದಯಾತ್ರೆ ಮಾಡಿದ್ದೇನು ? ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿ ನಿರಂತರವಾಗಿ ಫಲಾನುಭವಿಗಳನ್ನು ಅವಮಾನಿಸಿದರು. ಪ್ರಧಾನಿ ನರೇಂದ್ರ ಮೋದಿಯವರೂ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿದ್ದರು ಎಂದು ಕಿಡಿಕಾರಿದರು.
ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರದ ಗ್ಯಾರಂಟಿಗಳೇ ಜಾರಿ ಆಗಿಲ್ಲ ಎಂದು ಸುಳ್ಳು ಜಾಹಿರಾತನ್ನೇ ನೀಡಿತು. ನಿರಂತರ ಸುಳ್ಳು, ಅಪಪ್ರಚಾರದಲ್ಲೇ ಈ ಉಪಚುನಾವಣೆ ನಡೆಸಿದ್ದರು. ಎಲ್ಲಾ ಸುಳ್ಳು, ಅಪಪ್ರಚಾರಗಳಿಗೂ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಮಾಡಿದ ಆರೋಪ ನನಗೆ ಬಹಳ ಬೇಸರ ಆಗಿದೆ. ನಾನು ಬಹಳ ವರ್ಷ ಅವರ ಜೊತೆಗೆ ಇದ್ದವನು. ಆದ್ರೂ ಕೂಡ, ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದೇ ನನ್ನ ಗುರಿ, ಸಿದ್ದರಾಮಯ್ಯ ಅಹಂಕಾರ, ಸೊಕ್ಕು ಮುರಿತೀನಿ ಅಂತೆಲ್ಲಾ ಮಾತಾಡಿದರು ಎಂದು ವಾಗ್ಧಾಳಿ ನಡೆಸಿದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಇದು ಸಿಎಂ ಸಿದ್ಧರಾಮಯ್ಯ ಫಸ್ಟ್ ರಿಯಾಕ್ಷನ್ | CM Siddaramaiah
ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS