ಬೆಂಗಳೂರು : ನಿನ್ನೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ದಾಖಲಿಸಿದ್ದು ಬಿಜೆಪಿ ಸೋಲು ಅನುಭವಿಸಿದೆ. ಈ ಒಂದು ಸೋಲಿನ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಪಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಯತ್ನಾಳ್ ವಿರುದ್ಧ ಕಿಡಿ ಕಾರಿದ ಬಿವೈ ವಿಜಯೇಂದ್ರ ಹಗುರವಾಗಿ ಮಾತನಾಡಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ ಅವರು ಈ ಒಂದು ಸೋಲಿನ ಹೊಣೆಯನ್ನು, ಜವಾಬ್ದಾರಿಯನ್ನು ರಾಜ್ಯದ ಅಧ್ಯಕ್ಷನಾಗಿ ಸೋಲಿನ ಜವಾಬ್ದಾರಿ ನಾನು ಹೊರುತ್ತೇನೆ. ಮುಂದಿನ ದಿನಗಳಲ್ಲಿ ನಮ್ಮ ತಪ್ಪನ್ನ ಸರಿಪಡಿಸುತ್ತೇನೆ. ಆದರೆ ಯಾರು ನಮ್ಮ ವಿರುದ್ಧ ಈ ರೀತಿ ಹಗುರವಾಗಿ ಮಾತನಾಡುತ್ತಾರೆ.ಈ ರೀತಿ ಮಾತನಾಡಿದರೆ ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬರು ಕೇಂದ್ರದ ಸಚಿವರಾಗಿ ಕೆಲಸ ಮಾಡಿರುವಂತಹವರು. ಇನ್ಮೇಲೆ ಹಗುರವಾಗಿ ಮಾತನಾಡುವುದನ್ನು ಬಿಟ್ಟು, ಮುಂದೆ ಪಕ್ಷದಲ್ಲಿ ಮಾಡಬೇಕಾದಂತಹ ಕೆಲಸ ಮಾಡಲಿ. ಕಾರ್ಯಕರ್ತರನ್ನು ಸಂಘಟನೆಗೊಳಿಸಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಲಿ. ಪಕ್ಷ ಸಂಘಟನೆಗೆ ಪೂರಕವಾಗಿ ಕೆಲಸ ಮಾಡುವಂತಹ ಕೆಲಸ ಸಾಧ್ಯವಾದರೆ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯತ್ನಾಳ್ ಹೇಳಿದ್ದೇನು?
ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದ್ದು ನಮಗೂ ತುಂಬಾ ನೋವಾಗಿದೆ. ಹೈಕಮಾಂಡ್ ಇನ್ನಾದರೂ ಸಹ ವ್ಯಾಮೋಹ ಬಿಡಬೇಕು. ಪೂಜ್ಯ ತಂದೆಯವರು ಹಾಗೂ ಪೂಜೆ ತಂದೆಯವರ ಪುತ್ರರ ಮೇಲಿನ ವ್ಯಾಮೋಹವನ್ನು ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದರು.