ಮಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡುತ್ತಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಗೆ ಇದೀಗ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, ಅಪ್ಪನ ತೆಕ್ಕೆಯಲ್ಲಿ ಬೆಳೆದವರು ಹೇಳಿದ ಹಾಗೆ ಹಾಗಲ್ಲ ಎಂದು ಟಾಂಗ್ ನೀಡಿದರು.
ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಕಾಂಗ್ರೆಸ್ ಗಿಂತ ಡಬಲ್ ಕುಟುಂಬ ರಾಜಕಾರಣ ಇದೆ. ಒಂದೊಂದು ಕುಟುಂಬದಲ್ಲಿ 10 ಜನರು ರಾಜಕಾರಣದಲ್ಲಿ ಇದ್ದಾರೆ. ಕಾಂಗ್ರೆಸ್ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಾರೆ. ಬಿಜೆಪಿಯವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡದೆ ನಮ್ಮ ತಟ್ಟೆಯ ನೊಣ ನೋಡುತ್ತಿದ್ದಾರೆ.
ನಾವು ಕೊಟ್ಟಿರುವ ಕಾರ್ಯಕ್ರಮಗಳಿಂದ ಶಿಗ್ಗಾವಿಯಲ್ಲಿ ಗೆದ್ದಿದ್ದೇವೆ. ನಾವು ಕಾಂಗ್ರೆಸ್ ಪಕ್ಷದವರು ಗೂಬೆ ಅಲ್ಲ ಅಂತ ಬಿಜೆಪಿಗೆ ಗೊತ್ತಿಲ್ಲ. ಇಡಿ ಐಟಿ ಬಳಸಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ಮಾಡಿದೆ. ಸಿಎಂ ಬದಲಾಗುತ್ತಾರೆ ಅಂತ ಕೆಲವರು ತಿರುಕನ ಕನಸು ಕಾಣುತ್ತಿದ್ದರು. ಅಪ್ಪನ ತೆಕ್ಕೆಯಲ್ಲಿ ಬೆಳೆದವರು ಹೇಳಿದ ಹಾಗೆ ಆಗಲ್ಲ. ಸಿಎಂ ಬದ್ಲಾವಣೆ ಯಡಿಯೂರಪ್ಪನವರ ಸಹಿ ಮಾಡಿದ ಹಾಗೆ ಅಲ್ಲ ಚುನಾವಣಾ ಆಯೋಗ ಬಿಜೆಪಿಯ ಅಂಗವಾಗಿ ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದರು.