ಮಂಡ್ಯ : 2028 ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮೈಸೂರಿನ ಮಹಾರಾಜ ಹಾಗೂ ಸಂಸದ ಯದುವೀರ್ ಕೃಷ್ಣರಾಜ್ ಒಡೆಯರ್ ಭವಿಷ್ಯ ನುಡಿದರು ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಂಗಳ್ಳಿಯಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ತಂಗಳ್ಳಿಯಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿರುವ ಯದುವೀರ್ ಕೃಷ್ಣರಾಜ ಒಡೆಯರ್, ರಾಜ್ಯದ ಮೂರೂ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ನಮ್ಮ ಪರವಾಗಿ ಬಂದಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಆಗುತ್ತದೆ.
ಅದನ್ನು ಸ್ವೀಕರಿಸಬೇಕಾಗುತ್ತದೆ. ಆಡಳಿತ ಪಕ್ಷದ ಪರ ಉಪಚುನಾವಣೆಯ ಫಲಿತಾಂಶ ಬರುವುದು ಸಹಜ.ಆದರೂ ನಮ್ಮ ಉತ್ಸಾಹ ಕಡಿಮೆಯಾಗಿಲ್ಲ. ಮಹಾರಾಷ್ಟ್ರ ಹರಿಯಾಣದ ರೀತಿ ಕರ್ನಾಟಕದಲ್ಲಿ ಕೂಡ ಕೇಸರಿ ಧ್ವಜ ಹಾರುತ್ತದೆ. 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದು ಲಘುವಾಗಿ ಮಾಡಿದ ತೀರ್ಮಾನ ಅಲ್ಲ. ಮೋದಿ ಆಡಳಿತದ ಸ್ಪೂರ್ತಿಯಿಂದ ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿದ್ದೇನೆ.
ಪ್ರಧಾನಿ ಮೋದಿ ಅವರ ದೂರದೃಷ್ಟಿಯನ್ನು 60ವರ್ಷದಿಂದ ನೋಡಿರಲಿಲ್ಲ. 60 ವರ್ಷ ಬರಿ ಕೇಳಿಬಂದಿದ್ದು ಗರಿಬಿ ಹಠಾವೋ. ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ಮೋದಿಯಿಂದ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಸಂಸದ ಯದುವೀರ್ ಒಡೆಯರ್ ಹಾಡಿ ಹೊಗಳಿದ್ದಾರೆ.