ಮಂಗಳೂರು : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಅಕ್ರಮ ಹಣಕಾಸು ಬಗ್ಗೆ ಕಾಂಗ್ರೆಸ್ ಎಂಎಲ್ಸಿ ಹರಿಪ್ರಸಾದ್ ಆರೋಪ ಮಾಡಿದ್ದಾರೆ. ಕಂಟೇನರ್ಗಳಲ್ಲಿ ಹಣ ಬಂದಿದ್ದು, ತೂಕದ ಮೂಲಕ ಖರ್ಚು ಮಾಡಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ ಸೋಲಾಗಿದೆ. ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್ನಲ್ಲಿ ಹಣ ಬಂದಿದೆ. ಹಣ ಎಣಿಸುವ ಮಷಿನ್ ಬಿಟ್ಟು ತೂಕದ ಲೆಕ್ಕದಲ್ಲಿ ಖರ್ಚು ಮಾಡಿದ್ದಾರೆ ಎಂದು ಕಾಂಗ್ರೆಸ್ ಎಂಎಲ್ಸಿ ಹರಿಪ್ರಸಾದ್ ಆರೋಪ ಮಾಡಿದ್ದಾರೆ.
ಕರ್ನಾಟಕದಲ್ಲಿ ಎಲ್ಲೂ ಸಹ ಕೋಮು ಸೌಹಾರ್ದ ಕದಡಲು ಅವಕಾಶ ನೀಡಿಲ್ಲ. ರಾಜ್ಯದಲ್ಲಿ ಬೇರೆ ಪಕ್ಷಗಳು ಭಾರಿ ಹಣದ ಹೊಳೆ ಹರಿಸಿತ್ತು. ನಾವು ಕೂಡ ಅವರಿಗಿಂತ ಹೆಚ್ಚು ಪೈಪೋಟಿ ನೀಡಿದ್ದೇವೆ. ನಾವೇನು ಖಾವಿ ತೊಟ್ಟ ಸನ್ಯಾಸಿಗಳಲ್ಲ.ಅವರ ಹಣ, ಹೆಂಡಕ್ಕೆ ನಾವು ತಕ್ಕ ಉತ್ತರ ಕೊಟ್ಟಿದ್ದೇವೆ. ಆ ಮೂಲಕ ಕರ್ನಾಟಕದಲ್ಲಿ ಹಣ, ಹೆಂಡ ನೀಡಿದ್ದಾಗಿ ಒಪ್ಪಿಕೊಂಡರು. ನಮ್ಮ ಕೆಲಸದ ಮೂಲಕ ಕೂಡ ಉತ್ತರ ಕೊಟ್ಟಿದ್ದೇವೆ. ಬಿಜೆಪಿ ಚುನಾವಣೆಗೂ ಮೊದಲು ಸುಳ್ಳು ವದಂತಿ ಹಬ್ಬಿಸಿದ್ದರು. ಗ್ಯಾರಂಟಿ, ವಕ್ಫ್ ವಿಚಾರ ಪ್ರಸ್ತಾಪಿಸಿ ಅಪಪ್ರಚಾರ ಮಾಡಿದರು.